ಬೆಂಗಳೂರು ಕಾನ್ವೆಂಟ್‌ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್‌

By Kannadaprabha News  |  First Published Jul 15, 2024, 4:23 PM IST

ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ  ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. 
 


ವಿಜಯಪುರ (ಜು.15): ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಕಂಬಾಗಿ ಮತ್ತು ಬೋಳಚಿಕ್ಕಲಕಿ ಗ್ರಾಮಗಳಲ್ಲಿ ನಡೆದ ಉದ್ಘಾಟನೆ ಹಾಗೂ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. 

ಬಬಲೇಶ್ವರ ಮತ ಕ್ಷೇತ್ರದಲ್ಲಿ ನಾವು 3000 ಗುಡಿ, ಗುಂಡಾರಗಳಿಗೆ ಅನುದಾನ ನೀಡಿದ್ದೇವೆ. ಇದೇ ಹಣವನ್ನು ಬಳಸಿ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಬಹುದಾಗಿತ್ತು. ಶಾಲೆಯೇ ದೇವಸ್ಥಾನ, ಮಕ್ಕಳೇ ದೇವರು ಎಂದು ಬರಿ ಬಾಯಿ ಮಾತಿನಲ್ಲಿ ಹೇಳಿದರೆ ಆಗುವುದಿಲ್ಲ ಎಂದರು. ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಮಕ್ಕಳಲ್ಲಿ ದೇವರನ್ನು ಕಾಣುವ ಸಚಿವ ಎಂ.ಬಿ.ಪಾಟೀಲ ಅವರು ಈಗ ತಮ್ಮ ಅನುದಾನವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ನೀಡುತ್ತಿರುವುದು ಮಕ್ಕಳ ಪಾಲಿಗೆ ವರದಾನವಾಗಿದೆ ಎಂದರು.

Latest Videos

undefined

ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್ ಅತ್ಯಗತ್ಯ: ಸಚಿವ ಎಂ.ಬಿ.ಪಾಟೀಲ್‌

ಎಸ್‌ಡಿಎಂಸಿ ಅಧ್ಯಕ್ಷ ಹಸನಸಾಬ ಹಳಬರ, ಗ್ರಾಪಂ ಅಧ್ಯಕ್ಷೆ ಕವಿತಾ ಮಲ್ಲಯ್ಯ ಮಠಪತಿ, ಮುಖಂಡರಾದ ಈರಗೊಂಡ ಬಿರಾದಾರ, ಅಪ್ಪುಗೌಡ ಪಾಟೀಲ ಶೇಗುಣಸಿ, ಕೆ.ಎಚ್.ಮುಂಬಾರೆಡ್ಡಿ, ಮುತ್ತಪ್ಪ ಶಿವಣ್ಣವರ, ಪ್ರಕಾಶ ಸೊನ್ನದ, ಮಹಾದೇವ ಮದರಖಂಡಿ, ರಮೇಶ ಬಡ್ರಿ, ಶೇಖಪ್ಪ ಚಿಕ್ಕಗಲಗಲಿ, ರಂಗನಗೌಡ ಬಿರಾದಾರ, ಮಲ್ಲು ದಳವಾಯಿ, ಡಿಡಿಪಿಐ ಎನ್.ಎಚ್.ನಾಗೂರ, ಗ್ರಾಮೀಣ ಬಿಇಒ ಪ್ರಮೋದಿನಿ ಬಳೂಲಮಟ್ಟಿ, ಮಲ್ಲಿಕಾರ್ಜುನ ಅಂಗಡಿ, ಮಾರುತಿ ಕೊಪ್ಪದ, ಉಮೇಶ ಮಲ್ಲಣ್ಣವರ ಇತರರು ಇದ್ದರು.

ಬೋಳಚಿಕ್ಕಲಕಿ ಗ್ರಾಮದಲ್ಲಿ ಶ್ರೀ ಲಾಲಸಾಬ ದೇವರ ಕಟ್ಟಡ ಉದ್ಘಾಟನೆ, ಶ್ರೀಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಚವಡಿ ಕಟ್ಟಡ ಭೂಮಿ ಪೂಜೆಯನ್ನು ಸಚಿವ ಎಂ.ಬಿ.ಪಾಟೀಲ ನೆರವೇರಿಸಿದರು. ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಮುಖಂಡರಾದ ಸದಾಶಿವ ಸಜ್ಜನ, ಶಿವಾಜಿ ಮಾದರ, ಮುತ್ತಪ್ಪ ವಾಣಿ, ಸಿದ್ದು ತೋಟದ ಇತರರು ಇದ್ದರು.

ಬೀದರ್ ವಿಮಾನಯಾನ ಪುನಾರಂಭಕ್ಕೆ ಪ್ರಸ್ತಾವ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್‌ಗೆ ಖಂಡ್ರೆ ಪತ್ರ

ಸನ್ಮಾನ ಬೇಡ ಎಂದು ಆದೇಶ ಮಾಡಿಸುವೆ: ನನ್ನ ಮುಂದಿನ ಕಾರ್ಯಕ್ರಮಗಳಲ್ಲಿ ಹಾರ, ಶಾಲು, ಸನ್ಮಾನ ತರಬೇಡಿ. ಇದಕ್ಕೆ ಖರ್ಚು ಮಾಡುವ ಹಣವನ್ನು ಬಡವರಿಗೆ ನೀಡಿ. ನಾನು ಸನ್ಮಾನ ಮಾಡಿಕೊಳ್ಳುತ್ತಿರುವುದು ಇದು ಕೊನೆ ಕಾರ್ಯಕ್ರಮ. ಇನ್ನು ಮುಂದೆ ಸನ್ಮಾನ ಬೇಡ ಎಂದು ಡಿಸಿ ಮೂಲಕ ಆದೇಶ ಮಾಡಿಸುವೆ. ಸಿದ್ದೇಶ್ವರ ಸ್ವಾಮೀಜಿ ಎಂದೂ ಹಾರ ಹಾಕಿಸಿಕೊಳ್ಳಲಿಲ್ಲ. ಪಾದಗಳಿಗೆ ನಮಸ್ಕಾರ ಮಾಡಿಸಿಕೊಳ್ಳಲಿಲ್ಲ. ಅವರು ನಮಗೆ ಆದರ್ಶರಾಗಿದ್ದಾರೆ. ಸನ್ಮಾನ ಕಾರ್ಯಕ್ರಮದಿಂದಾಗಿ ಸಮಯವೂ ವ್ಯಯವಾಗುತ್ತದೆ. ಅದರ ಬದಲು ಒಂದು ಪುಸ್ತಕ ಕೊಟ್ಟರೆ ಸಾಕು ಎಂದು ತಿಳಿಸಿದರು.

click me!