ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವಲ್ಲಿ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಶಿರಾ ನಗರದ ಸರ್ಕಾರಿ ಪೌಢಶಾಲೆಯ ನೂತನ ಕಟ್ಟಡವನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಇದನ್ನೇ ಮಾದರಿಯನ್ನಾಗಿಟ್ಟುಕೊಂಡು ತಾಲೂಕಿನಾದ್ಯಂತ ಶಾಲೆಗಳನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಶಿರಾ : ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವಲ್ಲಿ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಶಿರಾ ನಗರದ ಸರ್ಕಾರಿ ಪೌಢಶಾಲೆಯ ನೂತನ ಕಟ್ಟಡವನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಇದನ್ನೇ ಮಾದರಿಯನ್ನಾಗಿಟ್ಟುಕೊಂಡು ತಾಲೂಕಿನಾದ್ಯಂತ ಶಾಲೆಗಳನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಬುಧವಾರ ನಗರದ ಸರ್ಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿ ಪ್ರಸಕ್ತ ಈ ವರ್ಷದ ಶೈಕ್ಷಣಿಕ ಸಾಲಿನ ತರಗತಿಗಳು ಬುಧವಾರ ಪ್ರಾರಂಭವಾದ ಹಿನ್ನೆಲೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಸ್ವಾಗತಿಸಿದರು. ಸರ್ಕಾರಿ ಶಾಲೆಗಳ ಎಲ್ಲಾ ಶಿಕ್ಷಕರು ನುರಿತ ಶಿಕ್ಷಕರಾಗಿದ್ದು ವಿದ್ಯಾರ್ಥಿಗಳಿಗೆ ಗುಣಮಟ್ಟದಲ್ಲಿ ಶಿಕ್ಷಣ ನೀಡುತ್ತಾರೆ. ಗುಣಮಟ್ಟಶಿಕ್ಷಣ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಆದ್ದರಿಂದ ನಗರದ ಸರ್ಕಾರಿ ಪ್ರೌಢಶಾಲೆಯನ್ನು ಖಾಸಗಿ ಶಾಲೆಗಿಂತ ಉತ್ತಮ ಶಾಲೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ ಎಂದ ಅವರು ಈ ವರ್ಷದಿಂದಲೇ ನನ್ನ ವೈಯಕ್ತಿಕ ಖರ್ಚಿನಲ್ಲಿ ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬ್ಯಾಗ್ ಹಾಗೂ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಉಪ ಪ್ರಾಂಶುಪಾಲರಾದ ನಾಗರಾಜ್ ರಾವ್, ಎಂಜಿನಿಯರ್‌ಗಳಾದ ಗೋಪಿಕುಂಟೆ ಸುಬ್ರಹ್ಮಣ್ಯ ಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಈರಣ್ಣ ಪಟೇಲ್, ಶ್ರೀನಿವಾಸ್, ಶ್ರೀಧರ್, ಅಶ್ವತ್ ರೆಡ್ಡಿ, ಗ್ರಾ.ಪಂ. ಸದಸ್ಯ ಶಿವಲಿಂಗಯ್ಯ, ನಿವೃತ್ತ ಶಿಕ್ಷಕ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.