ಸರ್ಕಾರ ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಆಸಕ್ತಿ ವಹಿಸಲಿ: ನಂಜಾವಧೂತ ಸ್ವಾಮೀಜಿ

By Kannadaprabha News  |  First Published Feb 10, 2024, 10:59 AM IST

ವಿದ್ಯೆ ಯಾರು ಕದಿಯಲಾಗದ ಸಂಪತ್ತು, ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಓದುವುದರಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಸರ್ಕಾರಗಳು ಸಹ ಗಡಿ ಭಾಗದ ಶಾಲೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.


 ಶಿರಾ :  ವಿದ್ಯೆ ಯಾರು ಕದಿಯಲಾಗದ ಸಂಪತ್ತು, ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಓದುವುದರಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಸರ್ಕಾರಗಳು ಸಹ ಗಡಿ ಭಾಗದ ಶಾಲೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ಬುಧವಾರ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಅರುಣೋದಯ ವಿದ್ಯಾಸಂಸ್ಥೆಯ ಅರುಣೋದಯ ಯ ಉತ್ಸವ-24 ವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಕಲಿತ ಅಕ್ಷರ ಯಾವುದೋ ರೀತಿ ಜಗತ್ತಿಗೆ ಬೆಳಕು ಕೊಡುತ್ತದೆ, ವಿದ್ಯಾವಂತನಿಗೆ ಗೌರವ ಸದಾ ಕಾಲಕ್ಕೂ ಇರುತ್ತದೆ. ಜ್ಞಾನವೇ ಬಹಳ ದೊಡ್ಡ ಶಕ್ತಿ ಎಂದರು.

Latest Videos

undefined

ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ, ಮಗುವಿನ ಮುಗ್ಧತೆಯಿಂದ ಕೂಡಿರುತ್ತದೆ ನಾವು ಕೂಡ ಮುಗ್ಧತೆಯಿಂದ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸಿದಾಗ ಪ್ರತಿ ಮಗು ಕೂಡ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ ಎಂದರು.

ಅರುಣೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಂಜುನಾಥ್ ಮಾತನಾಡಿದರು.

ತಡಕಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹರೀಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿಡಗಟ್ಟೆ ಚಂದ್ರಶೇಖರ್‌, ಅಂತ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುನಿಸ್ವಾಮಿ, ಸಂಸ್ಥೆಯ ಕಾರ್ಯದರ್ಶಿ ಚಂದ್ರಮ್ಮ ಮಂಜುನಾಥ್, ಲಕ್ಷ್ಮಿ, ಮುಖ್ಯ ಶಿಕ್ಷಕ ಮಂಜುನಾಥ್ ಸೇರಿದಂತೆ ನೂರಾರು ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಅರುಣೋದಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಉತ್ಸವ ನೋಡುಗರ ಗಮನ ಸೆಳೆಯಿತು.

click me!