
ಹುಬ್ಬಳ್ಳಿ[ಜು.30] ಆಡಳಿತರೂಢ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಕೂಗಾಗಿದೆ ಎಂದು ಹುಬ್ಬಳ್ಳಿಯಲ್ಲಿ ಬಾಲೇಹೊಸುರಿನ ಪೀಠಾಧ್ಯಕ್ಷ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಆಧ್ಯತೆ ನೀಡಿದ್ದರೆ ಇವತ್ತು ಪ್ರತ್ಯೇಕತೆಯ ಕೂಗು ಕೇಳುತ್ತಿರಲಿಲ್ಲ. ಈ ಕೂಗು ಈ ಭಾಗದ ಜನರ ಕೂಗು.ಪ್ರಾಂತ್ಯವಾರು ಭೇದ ತೋರದೇ ಸಮಗ್ರ ಕರ್ನಾಟಕದ ಅಭಿವೃದ್ಧಿ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಪ್ರತ್ಯೇಕ ರಾಜ್ಯ: ಯಾಕೆ ಬೇಕು? ಯಾಕೆ ಬೇಡ
ರಾಜ್ಯ ವಿಭಜನೆ ವಿಚಾರವಾಗಿ ಕುಮಾರಸ್ವಾಮಿಯವರು ಮಾಧ್ಯಮಗಳ ಮೇಲೆ ಗೂಬೆ ಕೂಡಿಸುವುದು ಸಲ್ಲ. ಯಾವ ಸಂದರ್ಭದಲ್ಲಿ ಯಾವ ಹೇಳಿಕೆ ನೀಡಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.