ಬೆಂಗಳೂರು ನಿವಾಸಿಗಳಿಗೆ ಹಸು ಸಾಕಲು ಅರ್ಜಿ ಆಹ್ವಾನಿಸಿದ ಸರ್ಕಾರ: ಮಿಶ್ರತಳಿ ಹಸುಗೆ ಭರ್ಜರಿ ಸಹಾಯಧನ

By Sathish Kumar KH  |  First Published Nov 20, 2023, 7:35 PM IST

ಸಿಲಿಕಾನ್‌ ಸಿಟಿ ಬೆಂಗಳೂರು ನಿವಾಸಿಗಳಿಗೆ ಮಿಶ್ರತಳಿ ಹಸುಗಳನ್ನು ಸಾಕಣೆ ಮಾಡಲು ಸಹಾಯಧನ ನೀಡುವುದಾಗಿ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ.


ಬೆಂಗಳೂರು (ನ.20): ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ 2023-24ನೇ ಸಾಲಿನ ಹಾಲು ಉತ್ಪಾದಕರನ್ನು ಉತ್ತೇಜಿಸಲು  ವಿಶೇಷ ಘಟಕ ಯೋಜನೆ / ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮಿಶ್ರತಳಿ ಹಸು/ಎಮ್ಮೆ ಖರೀದಿಸಲು ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ  ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ತಾಲ್ಲೂಕು  ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಕಚೇರಿ, ನಗರ ಪಶು ಆಸ್ಪತ್ರೆ, ಚಾಮರಾಜಪೇಟೆ ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ನವೆಂಬರ್ 30 ರೊಳಗೆ ಸಂಜೆ 4 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು  ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಕಚೇರಿ, ನಗರ ಪಶು ಆಸ್ಪತ್ರೆ, ಚಾಮರಾಜಪೇಟೆ ಬೆಂಗಳೂರು ದಕ್ಷಿಣ ತಾಲ್ಲೂಕು ಅಥವಾ ದೂರವಾಣಿ: 9448206163 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಪಶು ವೈದ್ಯ ಆಸ್ಪತ್ರೆಯ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tap to resize

Latest Videos

undefined

ರಾಜ್ಯದ 4 ಲಕ್ಷ ವಿದ್ಯಾರ್ಥಿಗಳಿಗೆ ಶಾಕ್‌: ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ರದ್ದುಗೊಳಿಸಿದ ಸರ್ಕಾರ

ಕ್ರಿಯಾತ್ಮಕ ಸಾಂಸ್ಕೃತಿಕ ಪ್ರೋತ್ಸಾಹ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24 ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ  ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸೇವಾಸಿಂಧು  www.sevasindhu.karnataka.gov.in  ಮುಖಾಂತರ ಡಿಸೆಂಬರ್ 13ರೊಳಗೆ ಸಲ್ಲಿಸಬಹುದು.

ಪದವೀಧರರಿಗೆ ಗುಡ್‌ ನ್ಯೂಸ್: 2024ರಿಂದ ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ-ಸಿಎಂ ಸಿದ್ದರಾಮಯ್ಯ

ಹೆಚ್ಚಿನ ಮಾಹಿತಿಗಾಗಿ: ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಗೆ ದೂರವಾಣಿ ಸಂಖ್ಯೆ: 080-22279954, 22213530,9986837037, 8792662814, 8792662816,  ಅಥವಾ ಇಲಾಖೆಯ ವೈಬ್ ಸೈಟ್  www.kannadasiri.karnataka.gov.in  ಅಥವಾ ಆಯಾ ಜಿಲ್ಲಾ ವ್ಯವಸ್ಥಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

click me!