ಪ್ರವಾಹ : ಶಿವಮೊಗ್ಗ ಜಿಲ್ಲೆಗೆ ಹೆಚ್ಚುವರಿ ಅನುದಾನ ಬಿಡುಗಡೆ

Published : Sep 06, 2019, 10:14 AM IST
ಪ್ರವಾಹ : ಶಿವಮೊಗ್ಗ ಜಿಲ್ಲೆಗೆ ಹೆಚ್ಚುವರಿ ಅನುದಾನ ಬಿಡುಗಡೆ

ಸಾರಾಂಶ

ರಾಜ್ಯದಲ್ಲಿ ಕಳೆದ ಕೆಲ ದಿನಗಳ ಹಿಂದೆ ಉಂಟಾದ ಭಾರೀ ಪ್ರವಾಹದಿಂದ ಹಲವು ಜಿಲ್ಲೆಗಳು ತತ್ತರಿಸಿದ್ದು, ಇದೀಗ ಬೆಳಗಾವಿ ಹಾಗೂ ಶಿವಮೊಗ್ಗಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ. 

ಬೆಂಗಳೂರು (ಸೆ.06) : ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 30 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. 

ಅಲ್ಲದೆ, ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ಗಳ ಪರಿಹಾರಕ್ಕೆ 10 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. 

ಆಗಸ್ಟ್‌ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿದ್ದ ನೆರೆ ಪರಿಸ್ಥಿತಿಯಿಂದ ಬಟ್ಟೆ ಬರೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರು ವಂತೆ ತಲಾ 10 ಸಾವಿರ ರು. ಪರಿಹಾರ ನೀಡಲು ಹಾಗೂ  ಇತರೆ ರಕ್ಷಣಾ ಕಾರ್ಯಗಳಿಗೆ ಬಿಲ್ಲುಗಳ ಸಂದಾಯಕ್ಕೆ 40  ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಸೆ. 1ರಂದು ಸರ್ಕಾರವನ್ನು ಕೋರಿದ್ದರು. 

ಮಳೆಗೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಪರಿಹಾರಕ್ಕೆ 10 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆಗೆ ಅಲ್ಲಿನ ಡೀಸಿ ಮನವಿ ಮಾಡಿದ್ದರು. 

PREV
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ