ನಗರಕ್ಕೆ ತಾನು ಕಳ್ಳ, ಪರರ ನಂಬ ಎಂಬಂತಿದೆ ಬಿಜೆಪಿ ನಡೆ : ಗೌಡ ಆರೋಪ

By Kannadaprabha News  |  First Published Jul 28, 2023, 5:06 AM IST

ತಾನು ಕಳ್ಳ ಪರರ ನಂಬ, ಎಂಬಗಾದೆ ಮಾತನ್ನು ಈಗಿನ ಬಿಜೆಪಿ ರಾಜಕಾರಣಿಗಳನ್ನು ನೋಡಿಯೇ ಮಾಡಿರಬೇಕು ಎಂದು ಸರ್ವೋದಯ ಕರ್ನಾಟಕ ಮುಖಂಡ ಉಗ್ರ ನರಸಿಂಹೇಗೌಡ ಟೀಕಿಸಿದ್ದಾರೆ


 ಮೈಸೂರು :  ತಾನು ಕಳ್ಳ ಪರರ ನಂಬ, ಎಂಬಗಾದೆ ಮಾತನ್ನು ಈಗಿನ ಬಿಜೆಪಿ ರಾಜಕಾರಣಿಗಳನ್ನು ನೋಡಿಯೇ ಮಾಡಿರಬೇಕು ಎಂದು ಸರ್ವೋದಯ ಕರ್ನಾಟಕ ಮುಖಂಡ ಉಗ್ರ ನರಸಿಂಹೇಗೌಡ ಟೀಕಿಸಿದ್ದಾರೆ. ಈಗ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾ ರಾಜಕಾರಣವನ್ನು ನಿಯಂತ್ರಿಸುವ ಬದಲು ವಿರೋಧ ಪಕ್ಷಗಳನ್ನು ಬಾಲಿಶವಾಗಿ ಲೇವಡಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗ ಮತ್ತೆ ವಾಜಪೇಯಿ ಅವರ, ರಾಜ ಧರ್ಮ ಕಾ ಪಾಲನ್‌ ಕರೋ, ಮಾತನ್ನು ನೆನಪಿಸಿ ಕೊಡಬೇಕಿದೆ.

ಸ್ವಂತ ವ್ಯಕ್ತಿತ್ವವೇ ಇಲ್ಲದೆ ಅಧಿಕಾರಕ್ಕಾಗಿ ಯಾವ ಛಧ್ಮ ವೇಷವನ್ನಾದರೂ ತೊಡಲು ಸಿದ್ದರಿರುವ ಪೈಶಾಚಿಕ ಮನೋವೃತ್ತಿಯ ಬಿಜೆಪಿಗರು, ಜನತಾ ದ್ರೋಹದ ಬಗ್ಗೆ ಮಾತಾಡುವುದು, ಭೂತದ ಬಾಯಲ್ಲಿ ಭಗವದ್ಗೀತೆ ಎಂಬ ಮಾತು ನೆನಪಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Latest Videos

undefined

ಪೊಲೀಸ್‌ ಠಾಣೆಯನ್ನೇ ಕಾಪಾಡಲು ಆಗದವರು

ಬೆಂಗಳೂರು (ಜು.28): ಬಿಜೆಪಿಯವರು ಪೊಲೀಸ್‌ ಠಾಣೆಯನ್ನೇ ಕಾಪಾಡಲು ಆಗದವರು, ಶಾಸಕರ ಮನೆಗೆ ಬೆಂಕಿ ಹಾಕಲು ಬಿಟ್ಟವರು. ಇವರ ಯೋಗ್ಯತೆ ಏನು ಎನ್ನುವುದನ್ನು ನಾವು ಹೇಳಬೇಕಾ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿಗಳಾಗಿರುವ ಬಿಜೆಪಿಯವರಿಗೆ 5 ಗ್ಯಾರಂಟಿಗಳು ಜಾರಿ ಆಗಿರುವುದು, ಚೆನ್ನಾಗಿ ನಡೆಯುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಸದಾ ಸರ್ಕಾರದ ವಿರುದ್ಧ ಕುಂಟು ನೆಪ, ಸುಳ್ಳು ಆರೋಪಗಳನ್ನು ಮಾಡುತ್ತಾ ಮೈ ಪರಚಿಕೊಳ್ಳುತ್ತಿದ್ದಾರೆ. ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಅಮಾಯಕರನ್ನು ಬಿಡು ಎಂದು ಯಾರೂ ಹೇಳಿಲ್ಲ

ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಅದನ್ನು ಬಿಜೆಪಿಯವರಿಂದ ಹೇಳಿಸಿಕೊಂಡು ಮಾಡಬೇಕಿಲ್ಲ ಎಂದರು. ರಾಜ್ಯದಲ್ಲಿ ಪ್ರತಿಪಕ್ಷಗಳೇ ಇಲ್ಲ. ಬಿಜೆಪಿಯವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗಿಲ್ಲ. ಜೆಡಿಎಸ್‌ಗೆ ಮುಂದೆ ಅಸ್ತಿತ್ವ ಇರುತ್ತೋ ಇಲ್ವೋ ಗೊತ್ತಿಲ್ಲ. ಬಿಜೆಪಿಯಲ್ಲಿ ವಿಲೀನ ಆಗುತ್ತೇನೋ ಗೊತ್ತಿಲ್ಲ. ಈಗ ರಾಜ್ಯದಲ್ಲಿ ಒರಿಜಿನಲ್‌ ಬಿಜೆಪಿಯೂ ಇಲ್ಲ, ಜೆಡಿಎಸ್‌ ಇಲ್ಲ. ಬಿಜೆಪಿಯವರು ಹತಾಶರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದ ಅವರು, ಎಚ್‌.ಡಿ. ಕುಮಾರಸ್ವಾಮಿ ಅವರು ಎಸ್‌.ಪಿ. ರೋಡ್‌ನಿಂದ ಪೆನ್‌ಡ್ರೈವ್‌ ತಂದು ಪ್ರದರ್ಶಿಸಿರಬಹುದು ಎಂದು ವ್ಯಂಗ್ಯವಾಡಿದರು.

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವಾಪಸ್‌ ಪಡೆಯಲ್ಲ: ಸಚಿವ ಎಂ.ಬಿ.ಪಾಟೀಲ್‌

ಪಿಡಿಒಗಳು ಶೀಘ್ರ ಮಾತೃ ಇಲಾಖೆಗೆ ವಾಪಸ್‌: ಬೇರೆ ಇಲಾಖೆ ಹಾಗೂ ಸ್ಥಳಗಳಿಗೆ ನಿಯೋಜನೆ ಮೇಲೆ ನೇಮಕವಾಗಿರುವ ಗ್ರಾಮ ಪಂಚಾಯತಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಿಬ್ಬಂದಿ, ಅಧಿಕಾರಿಗಳನ್ನು ವಾಪಸು ಮಾತೃ ಇಲಾಖೆಗೆ ಕರೆಸಿಕೊಳ್ಳಲು ಆದೇಶಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಶಶಿಲ್‌ ಜಿ.ನಮೋಶಿ ಪರವಾಗಿ ಜೆಡಿಎಸ್‌ನ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ, ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 660 ಪಿಡಿಒ, 604 ಗ್ರೇಡ್‌ 1 ಕಾರ್ಯದರ್ಶಿ ಹಾಊ 719 ಗ್ರೇಡ್‌ 2 ಕಾರ್ಯದರ್ಶಿ ಹುದ್ದೆಗಳು ಖಾಲಿಯಿವೆ. 

ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 150 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಉಳಿದ 510 ಪಿಡಿಒಗಳ ನೇಮಕಕ್ಕೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದೇ ರೀತಿ ಗ್ರಾ.ಪಂ. ಕಾರ್ಯದರ್ಶಿ ಹುದ್ದೆ ಸೇರಿ ಆರ್‌ಡಿಪಿಆರ್‌ ಇಲಾಖೆಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ವಿವರಿಸಿದರು.

click me!