ಡಿಕೆ ಸಹೋದರರ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಡಿಕೆ ಸಹೋದರರು ರಣತಂತ್ರ ರೂಪಿಸುತ್ತಿದ್ದಾರೆ.
ರಾಮನಗರ (ಆ19): ಕೊರೋನಾ ಭೀತಿ ನಡುವೆಯೂ ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಿಧಾನವಾಗಿ ಕಾವೇರ ತೊಡಗಿದೆ. ಜಿಲ್ಲಾಡಳಿತ ಗ್ರಾಮ ಪಂಚಾಯತ್ ಸ್ಥಾನಗಳಿಗೆ ಮೀಸಲಾತಿ ಹಾಗೂ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೂಲಕ ಚುನಾವಣೆಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ರಾಮನಗರ ಜಿಲ್ಲೆಯ 127 ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ಸದಸ್ಯ ಸ್ಥಾನಗಳಿಗೆ ಕಣ್ಣಿಟ್ಟಿರುವ ಆಕಾಂಕ್ಷಿತರು ಕೊರೋನಾವನ್ನು ಲೆಕ್ಕಿಸದೇ ಕ್ಷೇತ್ರಗಳಲ್ಲಿಮುಖಂಡರು ಹಾಗೂ ಮತದಾರರನ್ನು ಭೇಟಿ ಮಾಡುತ್ತಿದ್ದಾರೆ.
ಎಂಟಿಬಿ, ವಿಶ್ವನಾಥ್‌ಗೆ ಸಚಿವ ಸ್ಥಾನ ನೀಡದಂತೆ ಅರ್ಜಿ..
ಪಕ್ಷಗಳ ಬೆಂಬಲ ಪಡೆದುಕೊಳ್ಳಲು ಆಕಾಂಕ್ಷಿತರು ತಮ್ಮ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಮುಂದಿನ ಚುನಾವಣೆಗಳಿಗಾಗಿ ಈ ಚುನಾವಣೆಯನ್ನು ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿಯೇ ತೆಗೆದುಒಂಡಿವೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ನಡೆ..!
ಇನ್ನು ಇತ್ತ ಸಹೋದರರಾದಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅತೀ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ರಣತಂತ್ರ ರೂಪಿಸುತ್ತಿದ್ದಾರೆ.