ಬೆಳಗಾವಿ: ಮನೆಗೆ ಆಕಸ್ಮಿಕ ಬೆಂಕಿ, ಗ್ರಾಂ.ಪಂ.ಸದಸ್ಯ ಸಜೀವ ದಹನ

Suvarna News   | Asianet News
Published : May 13, 2021, 12:58 PM ISTUpdated : May 13, 2021, 01:04 PM IST
ಬೆಳಗಾವಿ: ಮನೆಗೆ ಆಕಸ್ಮಿಕ ಬೆಂಕಿ, ಗ್ರಾಂ.ಪಂ.ಸದಸ್ಯ ಸಜೀವ ದಹನ

ಸಾರಾಂಶ

* ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದ ಘಟನೆ * ಎಸಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಹೊತ್ತಿದ ಬೆಂಕಿ *  ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ  

ಚಿಕ್ಕೋಡಿ(ಮೇ.13): ಮನೆಗೆ ಬೆಂಕಿ ಬಿದ್ದ ಪರಿಣಾಮ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಸಜೀವವಾಗಿ ದಹನವಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಿನ್ನೆ(ಬುಧವಾರ) ರಾತ್ರಿ ನಡೆದಿದೆ. ಸೋಮಶೇಖರ್ ಶಿವಾನಂದ ಪಾಟೀಲ್(32) ಎಂಬುವರೇ ಸಜೀವವಾಗಿ ದಹನವಾದ ದುರ್ದೈವಿಯಾಗಿದ್ದಾರೆ.

ಎಸಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಬೆಂಕಿ ಅವಘಡದಲ್ಲಿ ಶಿರಗುಪ್ಪಿ ಗ್ರಾಂ ಪಂಚಾಯ್ತಿ ಸದಸ್ಯ ಸೋಮಶೇಖರ್ ಮೃತಪಟ್ಟಿದ್ದಾರೆ. 

ಕೋವಿಡ್‌ಗೆ ಡಿಸಿಎಂ ಸವದಿ ಸಹೋದರ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ ಬಲಿ

ಮನೆಯಲ್ಲಿ ಸೋಮಶೇಖರ್ ಒಬ್ಬರೇ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ದುರಂತದಿಂದ ಶಿರಗುಪ್ಪಿ ಗ್ರಾಮದ ಜನರು ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
 

PREV
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್