ಸಿಂದಗಿ: ಕೊಡಲಿಯಿಂದ ಕೊಚ್ಚಿ ಗ್ರಾ. ಪಂ ಉಪಾಧ್ಯಕ್ಷನ ಭೀಕರ ಕೊಲೆ

Suvarna News   | Asianet News
Published : Mar 05, 2020, 10:02 AM IST
ಸಿಂದಗಿ: ಕೊಡಲಿಯಿಂದ ಕೊಚ್ಚಿ ಗ್ರಾ. ಪಂ ಉಪಾಧ್ಯಕ್ಷನ ಭೀಕರ ಕೊಲೆ

ಸಾರಾಂಶ

ಗ್ರಾಮ ಪಂಚಾಯತ ಉಪಾಧ್ಯಕ್ಷನ ಕೊಲೆ| ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ ಗ್ರಾಮದಲ್ಲಿ ನಡೆದ ಘಟನೆ| ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು| ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ| 

ವಿಜಯಪುರ(ಮಾ.05): ಗ್ರಾಮ ಪಂಚಾಯತ ಉಪಾಧ್ಯಕ್ಷನೊಬ್ಬರನ್ನ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 

ಶರಣಪ್ಪ ಗುರಪ್ಪ ಪುಟಾಣಿ(55) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಯರಗಲ್ ಗ್ರಾ.ಪಂ ಉಪಾಧ್ಯಕ್ಷನಾಗಿದ್ದ ಶರಣಪ್ಪ ಹೊಲದಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ‌ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾರು ಕೊಲೆ ಮಾಡಿದರು ಎಂಬುದರ ಬಗ್ಗೆಯೂ ಮಾಹಿತಿ ಲಭ್ಯವಾಗಿಲ್ಲ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

PREV
click me!

Recommended Stories

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ: ಸರ್ಕಾರಕ್ಕೆ ಸಿ.ಟಿ.ರವಿ ಸವಾಲು
ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ