ಬೆತ್ತಲೆ ಫೋಟೋ ತೆಗೆಸಿ ಸುದ್ದಿಯಾದ ಗ್ರಾಮ ಪಂಚಾಯತ್ ಸದಸ್ಯನಿಂದ ಕಾರ್ಯದರ್ಶಿ ಮೇಲೆ ಹಲ್ಲೆ

Suvarna News   | Asianet News
Published : Jan 14, 2020, 03:02 PM IST
ಬೆತ್ತಲೆ ಫೋಟೋ ತೆಗೆಸಿ ಸುದ್ದಿಯಾದ ಗ್ರಾಮ ಪಂಚಾಯತ್ ಸದಸ್ಯನಿಂದ ಕಾರ್ಯದರ್ಶಿ ಮೇಲೆ ಹಲ್ಲೆ

ಸಾರಾಂಶ

ಗ್ರಾಮ ಮಂಚಾಯತ್ ಕಾರ್ಯದರ್ಶಿ ಮೇಲೆ ಗ್ರಾಮ ಪಂಚಾಯತ್ ಸದಸ್ಯನೇ ಹಲ್ಲೆ ಮಾಡಲು ಪ್ರಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಈ ಹಿಂದೆ ಬೆತ್ತಲೆ ಫೋಟೋ ತೆಗೆಸಿಕೊಂಡು ಸುದ್ದಿಯಾದ ಪ್ರಕಾಶ್ ಎಂಬಾತ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾನೆ.

ಮಂಡ್ಯ(ಜ.14): ಗ್ರಾಮ ಮಂಚಾಯತ್ ಕಾರ್ಯದರ್ಶಿ ಮೇಲೆ ಗ್ರಾಮ ಪಂಚಾಯತ್ ಸದಸ್ಯನೇ ಹಲ್ಲೆ ಮಾಡಲು ಪ್ರಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮ ಪಂಚಾಯುತು ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಲಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬಿಂಡಿಗನವಿಲೆ ಗ್ರಾಮ ಪಂಚಾಯತ್‌ನಲ್ಲಿ ಘಟನೆ ನಡದಿದ್ದು, ಗ್ರಾಮ ಪಂಚಾಯತ್ ಸದಸ್ಯನ ವಿರುದ್ದ FIR ದಾಖಲಿಸಲಾಗಿದೆ. ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ವಿರುದ್ಧ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದರು. ಇದೀಗ ಪ್ರಕಾಶ್ ವಿರುದ್ಧ FIR  ದಾಖಲಾಗಿದೆ.

ಪತಿ ಕೊಂದು ಹೂತಿಟ್ಲು; ಎರಡೂವರೆ ವರ್ಷಗಳ ನಂತ್ರ ಬಯಲಾದ ಕೊಲೆ ರಹಸ್ಯ..!

ಕಾರ್ಯದರ್ಶಿ ಹರೀಶ್ ಗೌಡನ ಮೇಲೆ ಮಂಗರವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಹಲ್ಲೆಗೆ ಯತ್ನಿಸಿದ್ದಾನೆ. ಬಿಂಡಿಗ ನವಿಲೆಯಲ್ಲಿ ಕೋಳಿ ಹಾಗೂ ಮಾಂಸ ಮಾರಾಟದ ಅಂಗಡಿಗಳ ತೆರವಿಗೆ ಮುಂದಾಗಿದ್ದ ಹರೀಶ್ ಗೌಡ ನಡೆಯಿಂದ ಕೋಪಗೊಂಡು ಪ್ರಕಾಶ್ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.

ಇದೇ ತಿಂಗಳ 10 ರಂದು ಪಂಚಾಯ್ತಿಯಲ್ಲಿ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರಕಾಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಪಂಚಾಯತಿ ಸಿಬ್ಬಂದಿ ಹಾಗೂ ಸ್ಥಳೀಯರು ಪ್ರಕಾಶ್‌ರನ್ನು ಸಮಾಧಾನಪಡಿಸಿ ಕಳುಹಿಸಿದ್ದರು.

ನಿಮಿಷಾಂಬ ದೇಗುಲದ 18 ಹುಂಡಿಗಳಲ್ಲಿ 31 ರೂಪಾಯಿ ಲಕ್ಷ ಸಂಗ್ರಹ..!

ಪ್ರಕಾಶ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಂಡಿಗ ನವಿಲೆ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಬೆತ್ತಲೆ ಫೋಟೊ ತೆಗೆಸಿಕೊಂಡು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ವಿವಾದಕ್ಕೆಡೆಯಾಗಿದ್ದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!