ಪ್ರತಿಭೆಗಳಿಗೆ ಅವಕಾಶ ನೀಡಲು ಗ್ರಾಮೀಣ ದಸರಾ ಆಯೋಜನೆ

By Kannadaprabha News  |  First Published Oct 16, 2023, 8:31 AM IST

ಮೈಸೂರು ದಸರಾ ವಿಶ್ವ ವಿಖ್ಯಾತಿಯನ್ನು ಪಡೆದಿದ್ದು, ನಾಡಿನ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸಿ ಪ್ರೋತ್ಸಾಹಿಸಿ ಬೆಳೆಸುವ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


 ನಂಜನಗೂಡು :  ಮೈಸೂರು ದಸರಾ ವಿಶ್ವ ವಿಖ್ಯಾತಿಯನ್ನು ಪಡೆದಿದ್ದು, ನಾಡಿನ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸಿ ಪ್ರೋತ್ಸಾಹಿಸಿ ಬೆಳೆಸುವ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಶ್ರೀಕಂಠೇಶ್ವರ ದೇವಾಲಯದ ಮುಂಭಾಗದಲ್ಲಿ ನಡೆದ ಗ್ರಾಮೀಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Latest Videos

undefined

ಈ ದಸರಾ ಕಾರ್ಯಕ್ರಮ ಬರೀ ನಗರ ಪ್ರದೇಶಕ್ಕೆ ಮೀಸಲಾಗಿರದೆ, ಗ್ರಾಮೀಣ ಜನರನ್ನೂ ತಲುಪಿ ಅದರಲ್ಲಿ ಭಾಗಿಯಾಗಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರತಿ ತಾಲೂಕಿನಲ್ಲೂ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಏರ್ಪಡಿಸಿದೆ, ಅಲ್ಲದೆ ಗ್ರಾಮೀಣ ಭಾಗದ ಕ್ರೀಡೆ, ಜಾನಪದ, ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಲುವಾಗಿ ಮತ್ತು ಗ್ರಾಮೀಣ ಭಾಗದ ಕಲಾವಿಧರಿಗೆ ವೇದಿಕೆ ಕಲ್ಪಿಸಿ ಅವಕಾಶ ಮಾಡಿಕೊಡುವ ಸಲುವಾಗಿ, ಹಾಗೂ ಸೊಗಡಿನ ಕಲೆ ಸಂಸ್ಕೃತಿ ಜಾನಪದ ಕಲಾಪ್ರಕಾರಗಳನ್ನು ಪ್ರೋತ್ಸಾಹಿಸಿ ಉತ್ತೇಜಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲೂ ಕೂಡ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಸ್ಥಳೀಯ ಕಲಾವಿದರಿಗೂ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ 8 ದಿನಗಳ ಕಾಲ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಯೋಗ ದಸರಾ ಕಾರ್ಯಕ್ರಮವನ್ನೂ ನಡೆಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಬಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ತಾಲೂಕು ಮಟ್ಟದಲ್ಲೂ ಕೂಡ ವಿಜೃಂಭಣೆಯಿಂದ ದಸರಾ ಆಚರಣೆಗೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಅಸ್ಸಾಂ ರಾಜ್ಯದ ಜಾನಪದ ನೃತ್ಯ ನೋಡುಗರ ಮನಸೂರೆಗೊಂಡವು. ಜೊತೆಗೆ ಸ್ಥಳೀಯ ಕಲಾವಿದರು ನಡೆಸಿಕೊಟ್ಟ ವೀರಗಾಸೆ ನೃತ್ಯ ಪ್ರೇಕ್ಷಕರ ಕಣ್ಮನ ಸೆಳೆದವು.

ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಮಹೇಶ್, ಸಿ.ಎಂ. ಶಂಕರ್. ನಗರಸಭಾ ಸದಸ್ಯರಾದ ಶ್ವೇತಲಕ್ಷ್ಮಿ, ಪ್ರದೀಪ್, ಎಸ್.ಪಿ. ಮಹೇಶ್, ಖಾಲಿದ್ ಅಹಮದ್, ಮುಖಂಡರಾದ ಶ್ರೀಧರ್, ಅನಸೂಯ ಗಣೇಶ್, ಕಾರ್ಮಿಕ ಮುಖಂಡ ಗೋವಿಂದರಾಜು, ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಆರ್.ಐ. ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ, ನಿರ್ಮಿತಿ ಕೇಂದ್ರದ ಎಇಇ ಮಂಜುನಾಥ್, ಯಶವಂತ್ ಇದ್ದರು.

click me!