ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ: ಕಟೀಲ್‌

By Web DeskFirst Published Oct 2, 2019, 10:46 AM IST
Highlights

ಕೇಂದ್ರ ತಂಡ ನೆರೆ ಪರಿಶೀಲನೆ ಮಾಡಿ ಹೋಗಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲಿದೆ ಎಂದ ನಳಿನ್‌ ಕುಮಾರ್‌ ಕಟೀಲ್‌| ನೆರೆ ವೀಕ್ಷಣೆಯನ್ನು ಕೇಂದ್ರದ ಗೃಹ ಸಚಿವರು ಕೂಡ ಪರಿಶೀಲನೆ ಮಾಡಿ ಹೋಗಿದ್ದಾರೆ| ರಾಜ್ಯದಿಂದ ಕೇಂದ್ರಕ್ಕೆ ವರದಿ ಸಲ್ಲಿಕೆಯಾಗಿದೆ| ಶೀಘ್ರದಲ್ಲೇ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ಬಿಡುಗಡೆ ಆಗಲಿದೆ| ಈ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್‌ ಶಾ ಸಿಎಂ ಗಮನಕ್ಕೆ ತಂದಿದ್ದಾರೆ| 

ಬೆಳಗಾವಿ:(ಅ.2): ಕೇಂದ್ರ ತಂಡ ನೆರೆ ಪರಿಶೀಲನೆ ಮಾಡಿ ಹೋಗಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ವೀಕ್ಷಣೆಯನ್ನು ಕೇಂದ್ರದ ಗೃಹ ಸಚಿವರು ಕೂಡ ಪರಿಶೀಲನೆ ಮಾಡಿ ಹೋಗಿದ್ದಾರೆ. ರಾಜ್ಯದಿಂದ ಕೇಂದ್ರಕ್ಕೆ ವರದಿ ಸಲ್ಲಿಕೆಯಾಗಿದೆ. ಶೀಘ್ರದಲ್ಲೇ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ಬಿಡುಗಡೆ ಆಗಲಿದೆ.

Latest Videos

ಈ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್‌ ಶಾ ಸಿಎಂ ಗಮನಕ್ಕೆ ತಂದಿದ್ದಾರೆ ಎಂದ ಅವರು, 16 ರಾಜ್ಯಗಳ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದ್ದು, ಮೊದಲು ವರದಿ ಕೊಟ್ಟವರಿಗೆ ಮೊದಲು ಹಣ ಬಿಡುಗಡೆ ಆಗಲಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ರಾಜ್ಯಾಧ್ಯಕ್ಷ ಅಧಿಕಾರ ವಹಿಸಿದ ಬಳಿಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇದೇ ಸಂದರ್ಭದಲ್ಲಿ ಬೆಳಗಾವಿ, ಚಿಕ್ಕೋಡಿಯಲ್ಲಿ ನಾಳೆ ಪ್ರವಾಸವಿದೆ. ಮಹಾತ್ಮ ಗಾಂಧಿ ಜಯಂತಿಯನ್ನು ವಿಭಿನ್ನವಾಗಿ ಆಚರಣೆ ಮಾಡಲಾಗುವುದು ಎಂದರು.

ಪರಿಹಾರ ನೀಡಲು ಕೇರಳದಲ್ಲಿ ನಾಲ್ಕು ತಿಂಗಳು ಆಯಿತು. ಈಗಾಗಲೇ ರಾಜ್ಯದಲ್ಲಿ ಸಂತ್ರಸ್ತರಿಗೆ 10 ಸಾವಿರ ಪರಿಹಾರ ವಿತರಿಸಲಾಗಿರುವುದು ಶ್ಲಾಘನೀಯ ಸಂಗತಿ ಎಂದರು.
 

click me!