ಹಸೆಮಣೆ ಏರಬೇಕಿದ್ದ ಯುವಕ ಮದುವೆ ಹಿಂದಿನ ದಿನವಷ್ಟೇ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಪೂನಾದಿಂದ ಆಗಮಿಸಿದ್ದ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆ ಫಲಿಸದೇ ಮೃತನಾಗಿದ್ದಾನೆ.
ಕಾರವಾರ (ಮೇ.04): ಹಸೆಮಣೆ ಏರಬೇಕಿದ್ದ ವರ ಕೋವಿಡ್-19 ಸೋಂಕಿನಿಂದಾಗಿ ಸೋಮವಾರ ಮೃತಪಟ್ಟಿದ್ದಾನೆ. ಸಂಭ್ರಮದಲ್ಲಿದ್ದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ನಗರದ ತೆಲೆಂಗಾರಸ್ತೆಯ ನಿವಾಸಿ, ಮದುಮಗ ರೋಷನ್ ಪಡವಲಕರ್(30) ಮೃತಪಟ್ಟವರು. ಪೂನಾದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೋಷನ್ ವಿವಾಹ ಮೇ 4ರಂದು (ಮಂಗಳವಾರ) ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ದಿನದ ಹಿಂದೆ ಪೂನಾದಿಂದ ರೋಷನ್ ಊರಿಗೆ ಆಗಮಿಸಿದ್ದರು.
undefined
ರಾಜ್ಯದಲ್ಲಿ ಇನ್ನೂ 15 ದಿನ ಸೋಂಕು ತೀವ್ರ ಏರಿಕೆ: ಡಾ| ಬಲ್ಲಾಳ್! ...
ವಾರದ ಹಿಂದೆ ಅನಾರೋಗ್ಯಕ್ಕೊಳಗಾಗಿ ಖಾಸಗಿ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ತೀವ್ರ ಅನಾರೋಗ್ಯಕ್ಕೆ ಓಳಗಾದ ಹಿನ್ನೆಲೆಯಲ್ಲಿ ತಕ್ಷಣ ಜಿಲ್ಲಾ ಆಸ್ಪತ್ರೆಗೆ ರೋಷನ್ ಅವರನ್ನು ಕರೆತರಲಾಗಿದೆ. ಆಸ್ಪತ್ರೆಗೆ ಬರುವಾಗಲೇ ಮೃತಪಟ್ಟಿದ್ದು, ನಂತರ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದೆ. ವಿವಾಹದ ಸಂಭ್ರಮದಲ್ಲಿದ್ದ ಮನೆಯವರಿಗೆ ವರನ ಅಕಾಲಿಕ ನಿಧನ ಬರಸಿಡಿಲಿನಂತೆ ಬಡಿದಿದ್ದು, ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona