'ಜಿಟಿಡಿ ಜೆಡಿಎಸ್‌ ಬಿಟ್ಟಾಗ ಮಾತಾಡುವೆ : ಅವ್ರು ಬಿಎಸ್‌ವೈ ಮನೆಗೂ ಹೋಗಿದ್ದರು'

Kannadaprabha News   | Asianet News
Published : Sep 10, 2021, 07:20 AM IST
'ಜಿಟಿಡಿ ಜೆಡಿಎಸ್‌ ಬಿಟ್ಟಾಗ ಮಾತಾಡುವೆ : ಅವ್ರು ಬಿಎಸ್‌ವೈ ಮನೆಗೂ ಹೋಗಿದ್ದರು'

ಸಾರಾಂಶ

ಮಾಜಿ ಸಚಿವ ಜಿ.ಟಿ.ದೇವೇಗೌಡ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಅವರಿನ್ನೂ ಜೆಡಿಎಸ್‌ನಲ್ಲೇ ಇದ್ದಾರೆ ಪಕ್ಷ ಬಿಟ್ಟಾಗ ಅವರ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ

ಮೈಸೂರು (ಸೆ.10): ಮಾಜಿ ಸಚಿವ ಜಿ.ಟಿ.ದೇವೇಗೌಡ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಅವರಿನ್ನೂ ಜೆಡಿಎಸ್‌ನಲ್ಲೇ ಇದ್ದು, ಪಕ್ಷ ಬಿಟ್ಟಾಗ ಅವರ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ. 

ಜಿ.ಟಿ.ದೇವೇಗೌಡ ಕಾಂಗ್ರೆಸ್‌ ಸೇರುವ ವಿಚಾರ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಉಳಿಸಿಕೊಳ್ಳುವುದು ಮುಂದಿನ ವಿಚಾರ. ಸದ್ಯಕ್ಕೆ ಅವರು ಇನ್ನೂ ಜೆಡಿಎಸ್‌ನಲ್ಲೇ ಇದ್ದಾರೆ ಎಂದರು.

ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

ಪಕ್ಷ ಬಿಟ್ಟಾಗ ನಾನು ಅವರ ಬಗ್ಗೆ ಮಾತನಾಡುತ್ತೇನೆ ಎಂದರು. ಜಿ.ಟಿ. ದೇವೇಗೌಡ ಅವರು ಸಿದ್ದರಾಮಯ್ಯ, ಯಡಿಯೂರಪ್ಪ ಮನೆಗೂ ಹೋಗಿದ್ದಾರೆ. ಕ್ಷೇತ್ರದ ವಿಚಾರವಾಗಿ ಚರ್ಚಿಸಲು ಹೋಗಿದ್ದಾರೆ. ಅದಕ್ಕೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಇನ್ನು ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲಿ. ಸರ್ಕಾರದ ನಿರ್ಧಾರಕ್ಕೆ ನಮ್ಮ ಪಕ್ಷ ಬೆಂಬಲವನ್ನು ನೀಡುತ್ತದೆ ಎಂದು ಎಚ್‌.ಡಿ.ದೇವೇಗೌಡರು ಸ್ಪಷ್ಟಪಡಿಸಿದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!