ದಸರೆಯಲ್ಲಿ ಮೋದಿ, ಬಿಎಸ್‌ವೈ ಗುಣಗಾನ ಮಾಡಿದ ಜಿಟಿಡಿ!

By Kannadaprabha News  |  First Published Sep 30, 2019, 12:40 PM IST

ಜೆಡಿಎಸ್‌ ವರಿಷ್ಠರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ದಸರೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌, ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ.


ಮೈಸೂರು(ಸೆ.30): ಜೆಡಿಎಸ್‌ ವರಿಷ್ಠರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ದಸರೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌, ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ.

ಕೇಂದ್ರದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರವಿದ್ದು, ಜನರ ಕಲ್ಯಾಣಕ್ಕೆ ಶ್ರಮಿಸಬೇಕು ಎಂದು ಮನವಿ ಮಾಡಿದ್ದಾರೆ.

Tap to resize

Latest Videos

ರಾಜ್ಯದಲ್ಲಿ ಹಿಂದೆ ಭೀಕರ ಬರಗಾಲ ತಲೆದೋರಿತ್ತು. ಆದರೆ ಯಡಿಯೂರಪ್ಪ ಅವರು ಸಿಎಂ ಆಗುತ್ತಿದ್ದಂತೆಯೇ ಉತ್ತಮವಾಗಿ ಮಳೆಯಾಗಿ ಜಲಾಶಯಗಳು ಭರ್ತಿಯಾದವು. ಯಡಿಯೂರಪ್ಪ ಅದೃಷ್ಟದ ಸಿಎಂ ಎಂದ ಅವರು, ರಾಜ್ಯದ ಜನ ಬಿಜೆಪಿಗೆ 25 ಪ್ಲಸ್‌ 1 ಸೀಟು ನೀಡಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು ದಸರಾ ವಸ್ತುಪ್ರದರ್ಶನ ಖಾಲಿ ಮಳಿಗೆ ಉದ್ಘಾಟಿಸಿದ ಸಿಎಂ

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗೆ ಕೇಂದ್ರ ಶೀಘ್ರ ಅನುದಾನ ನೀಡಬೇಕು. ಆ ಜನರಿಗೆ ಯಡಿಯೂರಪ್ಪ ಹಾಗೂ ಸೋಮವಣ್ಣ ಅವರು 2008 ರಲ್ಲಿ ಕಟ್ಟಿಸಿಕೊಟ್ಟಂತೆ ಉತ್ತಮ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಮಂಡ್ಯ: KRS ಸೌಂದರ್ಯವನ್ನು ಆಗಸದಿಂದ ಕಣ್ತುಂಬಿಕೊಳ್ಳಿ

ಹಾಸನಕ್ಕೆ ಹೋಲಿಸಿದರೆ ಮೈಸೂರು ಜಿಲ್ಲೆಗೆ ಅನುದಾನ ಕಡಿಮೆ ನೀಡಿದ್ದಾರೆ. ಆದ್ದರಿಂದ ಯಡಿಯೂರಪ್ಪ ಅವರು ಮೈಸೂರು ಜಿಲ್ಲೆಯ ಅಭಿಋುದ್ಧಿಗೆ ನೆರವಾಗಬೇಕು. ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಅವರು ಮನವಿ ಮಾಡಿದರು.

ದಸರಾ ಆಹಾರ ಮೇಳದಲ್ಲಿ 90ಕ್ಕೂ ಹೆಚ್ಚು ಮಳಿಗೆ..! ಬಾಯಲ್ಲಿ ನೀರೂರಿಸುವಂತಿದೆ ಮೆನು

click me!