ಸಿದ್ದರಾಮಯ್ಯ ಮನಸ್ಸಿನ ನೋವು ತೋಡಿಕೊಂಡರು : ಜಿಟಿ ದೇವೇಗೌಡ

By Suvarna News  |  First Published Dec 20, 2020, 12:56 PM IST

ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ ಎಂದು ಚಾಮುಂಡೇಶ್ವರಿ ಶಾಸಕ  ಜಿಟಿ ದೇವೇಗೌಡ ಹೇಳಿದ್ದಾರೆ. 


ಮೈಸೂರು (ಡಿ.20):  ಸಿದ್ದರಾಮಯ್ಯ ಅವರು ತಮ್ಮ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ ಎಂದು ಚಾಮುಂಡೇಶ್ವರಿ ಸೋಲು ಮರ್ಮಾಘಾತವನ್ನುಂಟು ಮಾಡಿದೆ ಎಂಬ ವಿಧಾ‌ನಸಭೆ ಪ್ರತಿಪಕ್ಷದ ‌ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. 

ಮೈಸೂರಿನಲ್ಲಿ  ಮಾತನಾಡಿದ ಶಾಸಕ ಜಿ ಟಿ ದೇವೇಗೌಡ,  ಮೊದಲು ವರುಣ,  ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲೂಕು ಬೋರ್ಡ್ ಮೆಂಬರ್‌ಯಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು.

Tap to resize

Latest Videos

ದೇವೇಗೌಡರ ಬಾಯಿ ಮುಚ್ಚಿಸಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ! ...

 ವರುಣ ಕ್ಷೇತ್ರವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು.  ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು. ಆದರೆ ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದರು. 

ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂಬ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಜಿಟಿಡಿ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013 ರ ಚುನಾವಣೆಯಲ್ಲಿ 8,000 ಮತ ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು.  ಬಿಜೆಪಿ15,000 ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ವೋಟ್ ಪಡೆದುಕೊಂಡಿದೆ.
ಪರೋಕ್ಷವಾಗಿ ಜೆಡಿಎಸ್- ಬಿಜೆಪಿ ಒಳಒಪ್ಪಂದ ಅಲ್ಲಗಳೆದ ಜಿ. ಟಿ. ದೇವೇಗೌಡ.

click me!