ಬಿಎಸ್‌ವೈ - ಸಿದ್ದರಾಮಯ್ಯ ಸಹಕಾರ ಎಂದ ಜಿಟಿಡಿ : ಬಣಕ್ಕೆ ಭರ್ಜರಿ ಗೆಲುವು

Kannadaprabha News   | Asianet News
Published : Mar 17, 2021, 09:01 AM IST
ಬಿಎಸ್‌ವೈ - ಸಿದ್ದರಾಮಯ್ಯ ಸಹಕಾರ ಎಂದ ಜಿಟಿಡಿ : ಬಣಕ್ಕೆ ಭರ್ಜರಿ ಗೆಲುವು

ಸಾರಾಂಶ

ಜಿಟಿಡಿ ಬಣಕ್ಕೆ ಭರ್ಜರಿ ಗೆಲುವು ದೊರೆತಿದ್ದು ಸಿಎಂ ಬಿ ಎಸ್  ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಹಕಾರದ  ಬಗ್ಗೆ ಈ ವೇಳೆ ಮಾತನಾಡಿದ್ದಾರೆ. 

ಮೈಸೂರು (ಮಾ.17):  ಮೈಮುಲ್‌ ಚುನಾವಣೆಯು ರಾಜಕೀಯ ಚುನಾವಣೆಯಲ್ಲ. ಇದರಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದರು.

ಮೈಮುಲ್‌ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಹ ರಾಜಕೀಯ ಬೆರೆಸಬಾರದು, ಇತರರು ಸಹ ರಾಜಕೀಯ ಬೆರೆಸದಂತೆ ನೋಡಿಕೊಳ್ಳಿ. ಇದರಲ್ಲಿ ಸರ್ಕಾರದ ಪಾತ್ರ ಏನು ಇಲ್ಲ. ಸಹಕಾರಿಗಳ ಷೇರುಗಳಿಂದ ಮೈಮುಲ್‌ ಈ ಮಟ್ಟಕ್ಕೆ ಬೆಳೆದಿದೆ ಎಂದರು.

ಸ್ವ ಪಕ್ಷದ ಶಾಸಕ ಜಿಟಿಡಿ ಪ್ರಾಬಲ್ಯ ಅಂತ್ಯಗೊಳಿಸಲು ಹೋಗಿ ಮಕಾಡೆ ಮಲಗಿದ ಕುಮಾರಸ್ವಾಮಿ ..

ಇತ್ತೀಚೆಗೆ ಯಡಿಯೂರಪ್ಪ, ಸಿದ್ದರಾಮಯ್ಯ ಹಾಲು ಉತ್ಪಾದಕರಿಗೆ ಬೆಂಬಲ ಬೆಲೆ ಕೊಟ್ಟು ಸಹಕಾರ ನೀಡುತ್ತಿದ್ದಾರೆ. ಇದರಲ್ಲಿ ನಾನು ಎಂಬುದಿಲ್ಲ. 

ಗೆದ್ದಿರುವರೆಲ್ಲಾ ನಮಗೆ ಬೆಂಬಲ ಕೊಡುತ್ತಾರೆ. ಇದರಲ್ಲಿ ಯಾವುದೇ ಪಕ್ಷ ಇಲ್ಲ. ನಾನು ಆಲದಮರ ಎಂದು ಎಲ್ಲಿಯೂ ಹೇಳಿಲ್ಲ. ಕುಮಾರಸ್ವಾಮಿಯವರು ಪ್ರಚಾರಕ್ಕೆ ಬಂದ ಆರಂಭದಲ್ಲೇ ಬೇಸರವಾಯಿತು. ಅವರೇ ಈ ಕ್ಷೇತ್ರದಲ್ಲಿ ಅನುಭವ ಇಲ್ಲ ಎಂದು ಹೇಳಿಕೊಂಡಿದ್ದರು. ಇಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

PREV
click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ