ಜೆಡಿಎಸ್ ಹಿರಿಯ ನಾಯಕ ಕಾಂಗ್ರೆಸ್‌ಗೆ ಸೇರ್ತಾರೆ : ರಾಜಣ್ಣ!

By Kannadaprabha News  |  First Published Jun 17, 2021, 7:39 AM IST
  • ಜೆಡಿಎಸ್ ಹಿರಿಯ ಮುಖಂಡ ಕಾಂಗ್ರೆಸ್‌ ಸೇರ್ಪಡೆ
  • ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೇ ಸ್ಪರ್ಧೆ
  • ಕೈ ಮುಖಂಡರಿಂದಲೇ ಪಕ್ಷ ಸೇರ್ಪಡೆ ಬಗ್ಗೆ ಹೇಳಿಕೆ

ತುಮಕೂರು (ಜೂ.17): ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಅಚ್ಚರಿಕೆಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಎಲ್ಲಿ ಸ್ಪರ್ಧಿಸಬಹುದು ಎನ್ನುವ ಪ್ರಶ್ನೆಗೆ ಉತ್ತರಿಸುವ ವೇಳೆ, ‘ನನ್ನ ಪ್ರಕಾರ ಸಿದ್ದರಾಮಯ್ಯನವರು ಬಾದಾಮಿ ಮತ್ತು ಚಾಮುಂಡೇಶ್ವರಿಯಿಂದ ಇನ್ನು ಸ್ಪರ್ಧಿಸುವುದಿಲ್ಲ. 

ಚುನಾವಣೆ 6 ತಿಂಗಳು ಇರುವಾಗ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್‌ಗೆ ಬರಲಿದ್ದು ಅವರೇ ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ತಿಳಿಸಿದರು.

Tap to resize

Latest Videos

ಪಕ್ಷ ತೊರೆಯಲು ಮುಂದಾದ ಶಾಸಕರಿಗೆ ದೇವೇಗೌಡ ಫೋನ್‌

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಾಮರಾಜಪೇಟೆ, ಬಾಗಲಕೋಟೆ ಬಳಿಕ ಇದೀಗ ಚಿಕ್ಕನಾಯಕಹಳ್ಳಿಯಿಂದಲೂ ಸ್ಪರ್ಧಿಸುವಂತೆ ಕಾಂಗ್ರೆಸ್‌ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಆಹ್ವಾನಿಸಿದ್ದಾರೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಚಿಕ್ಕನಾಯಕನಹಳ್ಳಿಯಲ್ಲಿ ಸ್ಪರ್ಧಿಸುವಂತೆ ನಾನು ಆಹ್ವಾನ ನೀಡಿದ್ದೇನೆ. ಕೋಲಾರದಲ್ಲೂ ಸ್ಪರ್ಧಿಸಬೇಕೆಂದು ಇದೆ. ಜಮೀರ್‌ ಅಹಮದ್‌ ಕೂಡ ಚಾಮರಾಜಪೇಟೆಯಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ.

 ನನ್ನ ಪ್ರಕಾರ ಸಿದ್ದರಾಮಯ್ಯನವರು ಬಾದಾಮಿ ಮತ್ತು ಚಾಮುಂಡೇಶ್ವರಿಯಿಂದ ಇನ್ನು ಸ್ಪರ್ಧಿಸುವುದಿಲ್ಲ. ಚುನಾವಣೆ 6 ತಿಂಗಳು ಇರುವಾಗ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್‌ಗೆ ಬರಲಿದ್ದು ಅವರೇ ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸುತ್ತಾರೆ ಎಂದರು. ಮುಂದೆ ಕಾಂಗ್ರೆಸ್‌ ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಲಿ. ನನಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.

click me!