ಜಿಟಿಡಿ, ಪ್ರತಾಪ್ ಸಿಂಹರಿಂದ ಪ್ರತ್ಯೇಕ ವ್ಯವಸ್ಥೆಗೆ ಸರ್ಕಾರಕ್ಕೆ ಒತ್ತಾಯ

By Kannadaprabha NewsFirst Published Mar 2, 2021, 1:48 PM IST
Highlights

ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ್ ಪ್ರತ್ಯೇಕ ವ್ಯವಸ್ಥೆಗಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಮೈಸೂರು (ಮಾ.02):  ಮೈಸೂರು ನಗರ ಮತ್ತು ತಾಲೂಕಿನ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಮೈಸೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ಥಾಪಿಸುವಂತೆ ಸಂಸದ ಪ್ರತಾಪಸಿಂಹ ಮತ್ತು ಶಾಸಕ ಜಿ.ಟಿ. ದೇವೇಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅವರಿಬ್ಬರೂ ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪ್ರತ್ಯೇಕ ಮನವಿಪತ್ರಗಳನ್ನು ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಯಾವತ್ತೂ ಹುಲಿನೇ, ಇಲಿಗಳು ಮಾತಾಡಬಾರದು

ಪ್ರಸ್ತುತ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಮೈಸೂರು- ಬೆಂಗಳೂರು ದಶಪಥ ನಿರ್ಮಾಣ ಕಾಮಗಾರಿ ಪೂರ್ಣವಾದರೆ ಬೆಂಗಳೂರಿನಿಂದ ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಲಿದೆ. ಬಂದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಜಲಮಂಡಳಿಯ ಅಗತ್ಯವಿದ್ದು, ಈಗಾಗಲೇ ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಾನಿರ್ವಹಿಸುತ್ತಿದೆ. ಪ್ರಸ್ತುತ ನಗರಾಭಿವೃದ್ಧಿ ಇಲಾಖೆಯು ನೀರು ಪೂರೈಕೆ ವ್ಯವಸ್ಥೆ ನಿರ್ವಹಿಸುತ್ತಿದ್ದು, ಎಂಡಿಎ ಅನುಮೋದಿತ ಬಡಾವಣೆಗೆ ಕುಡಿಯು ವನೀರು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿ.ಟಿ. ದೇವೇಗೌಡರು ತಿಳಿಸಿದ್ದಾರೆ.

ಮೈಸೂರು ನಗರವು ದ್ವೀಪದಂತಿದ್ದು, ಸುತ್ತಲೂ ನದಿ ನೀರು ಇದ್ದರೂ ಮೈಸೂರಿನ ಜನತೆಗೆ ಕುಡಿಯುವ ನೀರು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ ನಗರ ಮತ್ತು ತಾಲೂಕು ವ್ಯಾಪ್ತಿಯನ್ನು ಒಳಗೊಂಡಂತೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

click me!