ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಚಿಕ್ಕಹುಯಿಲಾಳು, ಹುಯಿಲಾಳು, ನಾಗವಾಲ, ಸೀಗಳ್ಳಿ, ಕಮರಹಳ್ಳಿ, ಮಾಣಿಕ್ಯಪುರ, ದೊಡ್ಡಮಾರಗೌಡನಹಳ್ಳಿ, ದೊಡ್ಡಹಟ್ಟಿಹುಂಡಿ, ಮರಯ್ಯನಹುಂಡಿ, ನುಗ್ಗಹಳ್ಳಿ, ಮಾದಹಳ್ಳಿ ಮತ್ತು ಶೆಟ್ಟನಾಯಕಹಳ್ಳಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ ನೀಡಿದರು.
ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಚಿಕ್ಕಹುಯಿಲಾಳು, ಹುಯಿಲಾಳು, ನಾಗವಾಲ, ಸೀಗಳ್ಳಿ, ಕಮರಹಳ್ಳಿ, ಮಾಣಿಕ್ಯಪುರ, ದೊಡ್ಡಮಾರಗೌಡನಹಳ್ಳಿ, ದೊಡ್ಡಹಟ್ಟಿಹುಂಡಿ, ಮರಯ್ಯನಹುಂಡಿ, ನುಗ್ಗಹಳ್ಳಿ, ಮಾದಹಳ್ಳಿ ಮತ್ತು ಶೆಟ್ಟನಾಯಕಹಳ್ಳಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ ನೀಡಿದರು.
ಚಿಕ್ಕಹುಯಿಲಾಳು ಮತ್ತು ಹುಯಿಲಾಳು ಗ್ರಾಮಗಳಲ್ಲಿ ಬಾಕಿ ಇರುವ ಒಳಚರಂಡಿ ಕಾಮಗಾರಿ ಮತ್ತು ಎಸ್‌ಟಿಪಿ ನಿರ್ಮಾಣಕ್ಕೆ ಹಾಗೂ ವಿಶೇಷ ಅನುದಾನ . 50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ದೇವಸ್ಥಾನದವರಿಗೂ ಪೂರ್ಣಕುಂಬ ಸ್ವಾಗತದೊಂದಿಗೆ ಗ್ರಾಮಸ್ಥರು ಸ್ವಾಗತಿಸಿದರು.
undefined
ನಾಗವಾಲ ಗ್ರಾಮದಲ್ಲಿ ಜಿಪಂ, ತಾಪಂ, ಹಸಿರು ದಳ ಮತ್ತು ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ನಿರ್ಮಾಣಗೊಂಡಿರುವ ಘನತ್ಯಾಜ್ಯ ಸಂಸ್ಕರಣಾ ಘಟಕದ ಉದ್ಘಾಟನೆಯನ್ನು ನೆರವೇರಿಸಿದರು.
ಸೀಗಳ್ಳಿ ಗ್ರಾಮದಲ್ಲಿ . 25 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಹಾಗೂ ಕಮರಹಳ್ಳಿ ಗ್ರಾಮದಲ್ಲಿ . 25 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಮತ್ತು ನೂತನವಾಗಿ ನಿರ್ಮಿಸಿದ್ದ ಶಾಲಾ ಕೊಠಡಿಯನ್ನು ಉದ್ಘಾಟಿಸಿದರು.
ನಂತರ ಮಾಣಿಕ್ಯಪುರ ಗ್ರಾಮದಲ್ಲಿ . 25 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ, . 14 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಹಾಗೂ . 7 ಲಕ್ಷ ವೆಚ್ಚದಲ್ಲಿ ಅಡುಗೆ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿ . 24 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರೌಢ ಶಾಲಾ ಎರಡು ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ, ನಂತರ . 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ನಿರ್ಮಾಣಕ್ಕೆ ಮತ್ತು ದೊಡ್ಡಹಟ್ಟಿಹುಂಡಿ ಗ್ರಾಮದಲ್ಲಿ . 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಹಾಗೂ . 14 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕರು ಚಾಲನೆ ನೀಡಿದರು.
ಮರಯ್ಯನಹುಂಡಿ ಗ್ರಾಮದಲ್ಲಿ . 25 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ, ನುಗ್ಗಹಳ್ಳಿ ಗ್ರಾಮದಲ್ಲಿ . 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ, ಮಾದಹಳ್ಳಿ ಗ್ರಾಮದಲ್ಲಿ . 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಹಾಗೂ ಶೆಟ್ಟನಾಯಕನಹಳ್ಳಿ ಗ್ರಾಮದಲ್ಲಿ . 18 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಳವಾಡಿ ಶಿವಮೂರ್ತಿ, ಆಶ್ರಯ ಹಸ್ತ ಟ್ರಸ್ಟ್ ನಿರ್ದೇಶಕ ಎನ್.ಕೆ. ಶರ್ಮ, ಹಸಿರು ದಳ ಸಂಸ್ಥೆಯ ಸಹ ಸಂಸ್ಥಾಪಕರಾದ ನಳಿನಿ ಶೇಖರ್, ಹಿನಕಲ್ ಎಚ್.ಸಿ. ರಾಜು, ಯಲಚಹಳ್ಳಿ ರವಿ, ಕೋಟೆಹುಂಡಿ ಮಹದೇವು, ನಾಗವಾಲ ನರೇಂದ್ರ, ನಾಗವಾಲ, ದೊಡ್ಡಮಾರಗೌಡನಹಳ್ಳಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಇದ್ದರು.
ವಿಶ್ವನಾಥ್ಗಗೆ 15 ಕೋಟಿ
: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್.ವಿಶ್ವನಾಥ್ ಅವರಿಗೆ 15 ಕೋಟಿ ರು. ನೀಡಿರುವುದಾಗಿ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದೆ.
ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್.ವಿಶ್ವನಾಥ್‌ರವರಿಗೆ 15 ಕೋಟಿ ರು. ಹಣ ನೀಡಲಾಗಿತ್ತು. ಅದರಲ್ಲಿ ವಿಶ್ವನಾಥ್ 4ರಿಂದ 5 ಕೋಟಿ ರು. ವ್ಯಯಿಸಿದ್ದಾರೆ ಎಂಬುದಾಗಿ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಹಿರಂಗಪಡಿಸಿದ್ದಾರೆ. ವಿ.ಶ್ರೀನಿವಾಸ್ ಪ್ರಸಾದ್ ಸಹ ಚುನಾವಣೆಗೆ ಹಣ ಪಡೆದಿರುವಾಗಿ ಎಚ್.ವಿಶ್ವನಾಥ್ ಹೇಳಿದ್ದಾರೆ. ಇದೊಂದು ಗಂಭೀರ ವಿಚಾರ ಮತ್ತು ಬಹುದೊಡ್ಡ ಚುನಾವಣಾ ಅಕ್ರಮವಾಗಿದೆ ಎಂದು ಆಕ್ಷೇಪಿಸಿದರು.
ಎಚ್ ವಿಶ್ವನಾಥ್ ಗೆ ತಲೆಕೆಟ್ಟಿರಬೇಕು, ಶಾಸಕ ಕೆ ಜಿ ಬೋಪಯ್ಯ ಆಕ್ರೋಶ
ಅಲ್ಲದೆ, ಚುನಾವಣಾ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿ ಕೇವಲ 28 ಲಕ್ಷ ರು. ಖರ್ಚು ಮಾಡಲು ಅವಕಾಶ ಇರುತ್ತದೆ. ಆದ್ದರಿಂದ ಈ 15 ಕೋಟಿ ರು. ಬಿಜೆಪಿ ಹೇಗೆ ಸಂಪಾದಿಸಿತು? ಅಭ್ಯರ್ಥಿ ಎಚ್.ವಿಶ್ವನಾಥ್‌ಗೆ ಏಕೆ ವರ್ಗಾಯಿಸಲಾಯಿತು? ವಿಶ್ವನಾಥ್ ನಾಲ್ಕೈದು ಕೋಟಿ ಹಣವನ್ನು ಹೇಗೆ ವ್ಯಯಿಸಿದರು? ಉಳಿದ 10 ಕೋಟಿ ರು. ಈಗ ಎಲ್ಲಿದೆ? ಈ ಪ್ರಶ್ನೆಗಳಿಗೆ ಸ್ಪಷ್ಟಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
Karnataka Politics : ಚುನಾವಣೆ ಹಣದ ಲೆಕ್ಕ ಕೇಳಲು ಶ್ರೀನಿವಾಸಪ್ರಸಾದ್ ಯಾರು?
ಎಎಪಿ ರಾಜಕೀಯ ಚಟುವಟಿಕೆ ವಿಭಾಗದ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು, ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೆ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ. ಎಚ್.ವಿಶ್ವನಾಥ್ ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.