ಶ್ರೀಸಾಮಾನ್ಯರಿಗೆ ಗ್ಯಾರಂಟಿ ಅನುಕೂಲ: ಶ್ರೀನಿವಾಸ್‌

Published : Aug 31, 2023, 07:51 AM IST
 ಶ್ರೀಸಾಮಾನ್ಯರಿಗೆ ಗ್ಯಾರಂಟಿ ಅನುಕೂಲ: ಶ್ರೀನಿವಾಸ್‌

ಸಾರಾಂಶ

ಶಕ್ತಿಯೋಜನೆಯಿಂದ 48.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇಷ್ಟುಕಡಿಮೆ ಅವಧಿಯಲ್ಲಿ ಅವರಿಗೆಲ್ಲಾ ಸಾವಿರಾರು ರುಪಾಯಿ ಬಸ್‌ ಚಾಜ್‌ರ್‍ ಉಳಿತಾಯವಾಗಿದೆ ಎಂದು ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ತಿಳಿಸಿದರು.

  ಗುಬ್ಬಿ : ಶಕ್ತಿಯೋಜನೆಯಿಂದ 48.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇಷ್ಟುಕಡಿಮೆ ಅವಧಿಯಲ್ಲಿ ಅವರಿಗೆಲ್ಲಾ ಸಾವಿರಾರು ರುಪಾಯಿ ಬಸ್‌ ಚಾಜ್‌ರ್‍ ಉಳಿತಾಯವಾಗಿದೆ ಎಂದು ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ತಿಳಿಸಿದರು.

ಪಟ್ಟಣದ ಎಸ್‌.ಎಂ.ಪ್ಯಾಲೆಸ್‌ ಕಲ್ಯಾಣ ಮಂಟ ಹಾಗೂ ಎಸ್‌ಸಿಎಸ್‌ ಕಲ್ಯಾಣದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಅನ್ನಭಾಗ್ಯಕ್ಕೆ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ನಮಗೆ ವಂಚಿಸಿತು. ನಾವು ಅಕ್ಕಿಯ ಬದಲಿಗೆ ಹಣ ಕೊಟ್ಟೆವು. ಪ್ರತೀ ದಿನ, ಪ್ರತೀ ತಿಂಗಳು ಕೋಟಿಗೂ ಅಧಿಕ ಕುಟುಂಬಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆದುಕೊಳ್ಳುತ್ತಿವೆ ಎಂದರು.

ಜನಸಾಮಾನ್ಯರ ಆಶಯಗಳಿಗೆ ಸ್ಪಂದಿಸುತ್ತ ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷವು ಬದ್ಧವಾಗಿದೆ. ಜನರ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡು ಕ್ಷೇತ್ರಗಳ ಅಭಿವೃದ್ಧಿಯತ್ತಲೂ ಗಮನ ಹರಿಸುತ್ತೇವೆ. ಕಾಂಗ್ರೆಸ್‌ ಪಕ್ಷದ ಜನಪ್ರಿಯತೆಯನ್ನು ಸಹಿಸದ ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂಬ ಗಾಳಿಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ ಜನತೆ ಅವರ ಮಾತನ್ನು ಕೇಳುವಷ್ಟು ದಡ್ಡರಾಗಿಲ್ಲ. ಮುಂಬರುವ ಸ್ಥಳೀಯ ಹಾಗೂ ಲೋಕಸಭಾ ಚುನಾವಣೆಗಳಲ್ಲಿಯೂ ಪಕ್ಷವು ಜಯಬೇರಿ ಬಾರಿಸಿ ಅಧಿಕಾರ ಹಿಡಿಯುವುದು ಶತಸಿದ್ಧ. ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಬಳಿ ಚರ್ಚೆ ನಡೆಸಿದ್ದೇನೆ. ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಗೊಳಿಸಿಕೊಂಡು ಕ್ಷೇತ್ರದ ಸವಾಂರ್‍ಗೀಣ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಬಿ. ಆರತಿ, ತಾಲೂಕು ಪಂಚಾಯಿತಿ ಇಒ ಪರಮೇಶ್‌ ಕುಮಾರ್‌, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುಳಾದೇವಿ, ಪಟ್ಟಣ ಪಂಚಾಯಿತಿಯ ಸದಸ್ಯರು, ಕಾಂಗ್ರೆಸ್‌ ಮುಖಂಡರು, ನೂರಾರು ಫಲಾನುಭವಿಗಳು ಹಾಜರಿದ್ದರು. 

PREV
click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!