
ತುಮಕೂರು(ಜೂ.11): ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶವನ್ನ ಹೊರಹಾಕಿದ ಘಟನೆ ಇಂದು(ಶನಿವಾರ) ನಗರದಲ್ಲಿ ನಡೆದಿದೆ.
ಹೌದು, ಶ್ರೀನಿವಾಸ್ ಫೋಟೋ ಹಾಕಿ ಕೈಲಾಸ ಸಮಾರಾಧನೆ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿ ಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಭಾರೀ ವೈರಲ್ ಆಗುತ್ತಿದೆ.
ಹೀಗಾಗಿ ತುಮಕೂರಿನ ವಿದ್ಯಾನಗರದಲ್ಲಿರುವ ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಬಳಿ ಪೊಲೀಸರು ಭದ್ರತೆ ಕಲ್ಪಿಸಲಾಗಿದೆ.
ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುವೆ : Gubbi Srinivas
ನಿನ್ನೆ(ಶುಕ್ರವಾರ) ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಶಾಸಕ ಶ್ರೀನಿವಾಸ್, ಜೆಡಿಎಸ್ ಪಕ್ಷಕ್ಕೆ ಮತಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರು ಸ್ವಪಕ್ಷದ ಅಭ್ಯರ್ಥಿ ಶ್ರೀನಿವಾಸ್ ವಿರುದ್ಧ ಇಂದು ಪ್ರತಿಭಟನೆ ನಡೆಸೋದಕ್ಕೆ ಪ್ಲಾನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.