2018 ರ ಪಕ್ಷೇತರ ಅಭ್ಯರ್ಥಿ ಗೆ ಈಗ ಗುಬ್ಬಿ ಬಿಜೆಪಿಯಿಂದ ಟಿಕೆಟ್‌

By Kannadaprabha News  |  First Published Apr 13, 2023, 6:06 AM IST

ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್‌ ದಿಲೀಪ್‌ ಅವರಿಗೆ ಟಿಕೆಟ್‌ ನೀಡಿದೆ. 2018 ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಲೀಪ್‌ 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.


 ತುಮಕೂರು :  ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್‌ ದಿಲೀಪ್‌ ಅವರಿಗೆ ಟಿಕೆಟ್‌ ನೀಡಿದೆ. 2018 ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಲೀಪ್‌ 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

ವಿ. ಸೋಮಣ್ಣ ಅವರ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಅಲ್ಲದೇ ಹಿಂದುಳಿದ ವರ್ಗದ ಬೆಟ್ಟಸ್ವಾಮಿ ಕೂಡ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಯುವ ಮುಖಂಡ ದಿಲೀಪ್‌ಗೆ ಮಣೆ ಹಾಕಿದೆ.

Tap to resize

Latest Videos

40 ಕ್ಷೇರ್ಥೃಗಳಲ್ಲಿ ಅತೃಪ್ತಿ -  9 ಮಂದಿ ರಾಜೀನಾಮೆ

ಬೆಂಗಳೂರು(ಏ.13):  ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ಟಿಕೆಟ್‌ ಕೈತಪ್ಪಿದವರ ಆಕ್ರೋಶ ಭುಗಿಲೆದ್ದಿದೆ. ಮೊದಲ ದಿನವೇ ಹಿರಿಯರಾದ ಜಗದೀಶ್‌ ಶೆಟ್ಟರ್‌ ಬಂಡಾಯದ ಬಾವುಟ ಹಾರಿಸಿದ್ದರು. ಇದರ ಬೆನ್ನಲ್ಲೇ ಇದೀಗ 9 ಮಂದಿಗೆ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಮತ್ತೊಂದೆಡೆ, 15ಕ್ಕೂ ಹೆಚ್ಚು ಮಂದಿ ಸದ್ಯದಲ್ಲೇ ಪಕ್ಷಕ್ಕೆ ಸಡ್ಡು ಹೊಡೆದು ಪಕ್ಷೇತರರಾಗಿ ಸ್ಪರ್ಧಿಸುವ ಅಥವಾ ಬೇರೊಂದು ಪಕ್ಷದ ಮೂಲಕ ಚುನಾವಣಾ ಕಣದಲ್ಲಿ ಉಳಿಯಲು ನಿರ್ಧರಿಸಿದ್ದಾರೆ.

ಮಾಜಿ ಸಚಿವ ಆರ್‌.ಶಂಕರ್‌, ಲಕ್ಷ್ಮಣ್‌ ಸವದಿ, ಗೂಳಿಹಟ್ಟಿಶೇಖರ್‌, ಮುದ್ದಹನುಮೇಗೌಡ ಅವರು ಪಕ್ಷೇತರ ಅಥವಾ ಬೇರೊಂದು ಪಕ್ಷದಿಂದ ಸ್ಪರ್ಧಿಸುವ ಸುಳಿವು ನೀಡಿದ ಪ್ರಮುಖರಾದರೆ, ಸಚಿವ ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿ, ಸುಳ್ಯ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಿಂದಲೇ ದೂರವುಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಆಕ್ರೋಶ, ಬಿಜೆಪಿಗೆ ಶಾಸಕ ಗೂಳಿಹಟ್ಟಿ ಶೇಖರ್ ಗುಡ್ ಬೈ!

ಒಟ್ಟಾರೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಬಳಿಕ 40ಕ್ಕೂ ಹೆಚ್ಚು ಮಂದಿ ತಮ್ಮ ಅಸಮಾಧಾನ ಹೊರಹಾಕಿದ್ದು, ಸಚಿವ ಅಂಗಾರ, ಶಾಸಕ ರಘುಪತಿ ಭಟ್‌ ಸೇರಿ ಹಲವರು ಪಕ್ಷದ ನಿಲುವಿನ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಬೆಂಗಳೂರು ಸೇರಿ ರಾಜ್ಯದ ಇನ್ನೂ ಐದು ಕಡೆ ಟಕೆಟ್‌ ವಿಚಾರವಾಗಿ ಪ್ರತಿಭಟನೆ ನಡೆದು ವರಿಷ್ಠರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಎಲ್ಲೆಲ್ಲಿ, ಯಾರು ಬಂಡಾಯ ಸ್ಪರ್ಧೆ?:

ಮಾಜಿ ಸಚಿವ ಆರ್‌.ಶಂಕರ್‌ ಅವರು ಎಂಎಲ್ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗೂಳಿಹಟ್ಟಿಶೇಖರ್‌ ಅವರು ಜನಾರ್ದನ ರೆಡ್ಡಿ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಇನ್ನು ಧಾರವಾಡ ಜಿಲ್ಲೆ ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಎಸ್‌.ಐ.ಚಿಕ್ಕನಗೌಡರ ಹಾಗೂ ಧಾರವಾಡ ವಿಧಾನಸಭೆ ಕ್ಷೇತ್ರದ ಹಿರಿಯ ಮುಖಂಡ, ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವನಪ್ಪ ಅಷ್ಟಗಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಂಡಾಯವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ಅದೇ ರೀತಿ ಗದಗ ಜಿಲ್ಲೆ ಶಿರಹಟ್ಟಿಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ, ತುಮಕೂರಿಂದ ಕುಣಿಗಲ್‌ ಟಿಕೆಟ್‌ನ ಪ್ರಬಲ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ, ರಾಜೇಶ್‌ ಗೌಡ ಕೂಡ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ

click me!