ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್ ಎಂಟು ತಿಂಗಳಾಗುತ್ತಾ ಬಂದರೂ ಒಂದೇ ಒಂದು ಟೆಂಡರ್ ಕರೆದಿಲ್ಲ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಆಕ್ರೋಶ ವ್ಯಕ್ತಪಡಿಸಿದ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್
ವರದಿ: ವರದರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ದಾವಣಗೆರೆ
ದಾವಣಗೆರೆ(ಅ.20): ದಾವಣಗೆರೆ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಇಂತಹ ಕೆಟ್ಟ ಆಡಳಿತ ನೋಡಿಲ್ಲ ಪಾಲಿಕೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹೇಳತೀರದ್ದಾಗಿದೆ. ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್ ಎಂಟು ತಿಂಗಳಾಗುತ್ತಾ ಬಂದರೂ ಒಂದೇ ಒಂದು ಟೆಂಡರ್ ಕರೆದಿಲ್ಲ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
undefined
ಇಂದು(ಗುರುವಾರ) ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಮಳೆ ಬರುತ್ತಿರುವುದರಿಂದ ನೀರೆಲ್ಲಾ ರಸ್ತೆ ಮೇಲೆ ನಿಂತಿರುತ್ತದೆ. ಜನರ ಓಡಾಟಕ್ಕೆ ತುಂಬಾನೇ ತೊಂದರೆ ಆಗಿದೆ. ಅಧಿಕಾರಿಗಳು ಹಾಗೂ ಮೇಯರ್ ಗಮನಕ್ಕೆ ತಂದಿದ್ದರೂ ಪ್ರಯೋಜನ ಮಾತ್ರ ಶೂನ್ಯ. ದಪ್ಪ ಚರ್ಮದ ಆಡಳಿತ ವರ್ಗ ಹಾಗೂ ಅಧಿಕಾರ ವರ್ಗ ತಲೆಕೆಡಿಸಿಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಗುಂಡಿ ಅಗೆಯಲಾಗಿದೆ. ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಚಿಗಟೇರಿ ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಗುಂಡಿ ಅಗೆದಿದ್ದು, ವೇಗವಾಗಿ ಕಾಮಗಾರಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಪಾಮೇನಹಳ್ಳಿಯಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಆಗಿರುವ ಸಮಸ್ಯೆಗಳು ಒಂದೆರಡಲ್ಲ. ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಆಮೇಲೆ ಏನೇನೋ ಸಬೂಬು ಹೇಳುತ್ತಾರೆ. ಮೇಯರ್ ಅವರ ಗಮನಕ್ಕೆ ತಂದರೂ ಉಡಾಫೆ ಮಾತನಾಡುತ್ತಾರೆ. ಇವರಿಗೆ ಜನರ ಕಷ್ಟ ಕೇಳುವ ವ್ಯವಧಾನವೂ ಇಲ್ಲ. ಇನ್ನು ಪರಿಹರಿಸುವ ಮಾತು ಎಲ್ಲಿ ಎಂದು ಪ್ರಶ್ನಿಸಿದರು.
ದಾವಣಗೆರೆಯಲ್ಲಿ 'ಹೆಡ್ ಬುಷ್' ಹವಾ: ಕಾರ್ಯಕ್ರಮಕ್ಕೆ ರಂಗು ತಂದ ತಾರಾ ಮಣಿಗಳು!
ಸಾಮಾನ್ಯ ಸಭೆ ನಡೆಸಿ ನಾಲ್ಕೈದು ತಿಂಗಳಾಗುತ್ತಾ ಬಂದಿದ್ದರೂ ಯಾವ ಕೆಲಸವೂ ಆಗುತ್ತಿಲ್ಲ. ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ, ಮುತ್ತಿಗೆ ಹಾಕುವಂಥ ಹೋರಾಟ ನಡೆಸಿದಾಗ ಕಣ್ಣೊರೆಸುವಂತೆ ನಾಟಕ ಮಾಡುವ ಆಡಳಿತ ಪಕ್ಷದವರಿಗೆ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಜನರ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸಿ ಅಭಿವೃದ್ಧಿ ಕೆಲಸ ಮಾಡಲಿ. ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸದಸ್ಯರಿಗೆ ಅನುದಾನ ಕೊಡುವಲ್ಲಿಯೂ ತಾರತಮ್ಯ ಮಾಡಿದ್ದ ಬಿಜೆಪಿ, ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯ ಸರ್ಕಾರದಿಂದ ಹಣ ತರುವಲ್ಲಿ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಅನುದಾನ ಕೇಳಲು ನಿಯೋಗ ಹೋಗುತ್ತೇವೆ ಎಂದಿದ್ದ ಬಿಜೆಪಿ ಸದಸ್ಯರು ಯಾಕೆ ಇದುವರೆಗೆ ಹೋಗಿಲ್ಲ ಎಂದು ಕಿಡಿಕಾರಿದರು.ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ಚಮನ್ ಸಬಾ್,ಅಬ್ದುಲ್ ಲತೀಫ್,ವಿನಾಯಕ ಪೈಲ್ವಾನ್,ಮಂಜುನಾಥ್ ಇಟ್ಟಿಗುಡಿ,ಗಣೇಶ್ ಹುಲ್ಲುಮನಿ,ಜಗದೀಶ್, ಉಮೇಶ್ ಇದ್ದರು