MLC ಮಾಡುವಂತೆ ಯಾರನ್ನೂ ಕೋರಿಲ್ಲ, ನಿಷ್ಠಾವಂತರಿಗೆ ಅವಕಾಶ ನೀಡಿ: ಎಚ್.ಆಂಜನೇಯ ಸ್ಪಷ್ಟನೆ

Published : Jun 15, 2026, 11:28 PM IST
h anjaneya

ಸಾರಾಂಶ

Congress Karnataka: ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಚಿತ್ರದುರ್ಗ (ಜೂ.15): ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ.ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ನಮ್ಮನ್ನು ಕಡೆಗಣಿಸಿಲ್ಲ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ಮುಂದುವರಿಸುತ್ತೇನೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್‍ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ಸಾಕ್ಷೀಕರಿಸಲು ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಕಲ ವ್ಯವಸ್ಧೆ ಮಾಡಿಕೊಳ್ಳಲಾಗಿದೆ ಎಂದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್‍ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್‍ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಆಂಜನೇಯಮನವಿ ಮಾಡಿದರು.

ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೆಲ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು.

PREV
Read more Articles on
click me!

Recommended Stories

Congress ಸಿದ್ದರಾಮಯ್ಯಗೆ ಎಂದೂ ದ್ರೋಹ ಮಾಡಿಲ್ಲ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸ್ಪಷ್ಟನೆ
belagavi Soldier murder: ದೇಶದ ಗಡಿ ಕಾಯುತ್ತಾ ಜನರ ಜೀವ ಕಾಪಾಡಿದ ಯೋಧನನ್ನ ವಿಮೆ ಹಣಕ್ಕಾಗಿ ಕೊಲೆ ಮಾಡಿದ ಹೆಂಡತಿ!