ಉಡುಪಿ ಜಿಲ್ಲೆಯ ಕೋಮು ಸೌಹಾರ್ದತೆಗೆ ಆದ್ಯತೆ: ನೂತನ ಎಸ್ಪಿ ಅಕ್ಷಯ್ ಮಚ್ಚೀಂದ್ರ

By Gowthami KFirst Published Aug 17, 2022, 9:21 PM IST
Highlights

ಎಲ್ಲಾ ಜಿಲ್ಲೆಯಲ್ಲೂ ಕೋಮು ಸೌಹಾರ್ದತೆ ಉಳಿಸಿಕೊಳ್ಳುವುದು ಪೋಲಿಸರ ಪ್ರಥಮ ಆದ್ಯತೆ ಎಂದು ಉಡುಪಿಯ ನೂತನ ಎಸ್ಪಿ ಅಕ್ಷಯ್ ಮಚ್ಚೀಂದ್ರ ಹೇಳಿದ್ದಾರೆ. 

ಉಡುಪಿ (ಆ.17): ಜಿಲ್ಲೆಯ ಕೋಮು ಸೌಹಾರ್ದತೆ ಉಳಿಸಿಕೊಳ್ಳಲು ಉಡುಪಿ ಜಿಲ್ಲೆಯ ಜನ ಸಹಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಎಲ್ಲಾ ಜಿಲ್ಲೆಯಲ್ಲೂ ಕೋಮು ಸೌಹಾರ್ದತೆ ಉಳಿಸಿಕೊಳ್ಳುವುದು ಪೋಲಿಸರ ಪ್ರಥಮ ಆದ್ಯತೆ, ಇಲ್ಲಿನ ಜನರು ಬುದ್ದಿವಂತರಾಗಿದ್ದು, ಪ್ರಗತಿಪರರಿದ್ದಾರೆ. ಈ ಸಮಸ್ಯೆಗಳನ್ನು ನಿರ್ವಹಿಸಲು ಜನರು ಸಹಾಯ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದರು. ರಾಜ್ಯ ಮತ್ತು ಜಿಲ್ಲಾ ಪೋಲಿಸ್ ಡ್ರಗ್ಸ್ ವಿರುದ್ದ ಯುದ್ದವನ್ನು ಸಾರಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ಸೇರಿದಂತೆ ಅನೇಕ ಭಾಗಗಳಲ್ಲಿ ಡ್ರಗ್ಸ್, ಗಾಂಜಾ ಪ್ರಕರಣಗಳಿದ್ದು, ಇದಕ್ಕೆ ಕಡಿವಾಣ ಹಾಕುವುದೇ ನನ್ನ ಮೊದಲ ಪ್ರಾಶಸ್ತ್ಯ ಎಂದರು. ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಮಾದಕ ವ್ಯಸನಿಗಳಾದವರ ಬದುಕು ಹಾಳಾಗುತ್ತಿದೆ. ಈ ಡ್ರಗ್ಸ್ ಮಾರಾಟ ಜಾಲದಿಂದ ಬರುವ ಹಣವು ಭಯೋತ್ಪಾದಕ ಚಟುವಟಿಕೆಗೆ ಬಳಕೆ ಆಗುತ್ತಿರುವುದು ಆಘಾತಕಾರಿಯಾಗಿದೆ‌. ಯುವಕರು ರಾಷ್ಟ್ರದ ಸಂಪತ್ತು. ಡ್ರಗ್ಸ್ ಅನ್ನು ಜಿಲ್ಲೆಯ ಸಂಪೂರ್ಣ ಮುಕ್ತಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು 

ಉಡುಪಿ ಜಿಲ್ಲೆಯಾಗಿ 25 ವರ್ಷಗಳಾಗಿದ್ದು, ಈ ವೇಳೆ ನಾನು ಎಸ್ಪಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿರುವುದು ಸಂತಸದ ವಿಷಯ. ಸಾಂಸ್ಕೃತಿಕ, ಪ್ರವಾಸೋದ್ಯಮ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಈ ಜಿಲ್ಲೆಗೆ ಉತ್ತಮ ಹೆಸರಿದೆ. ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗು ಮಹತ್ವದ ಪ್ರಕರಣಗಳನ್ನು ಪತ್ತೆ ಹಚ್ಚುವುದಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.

ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೆ ಹಾಗೂ ಸಾರ್ವಜನಿಕರ ಶಾಂತಿಗೆ ಭಂಗ ತರುವ ಯಾವುದೇ ಚಟುವಟಿಕೆಗಳು ಸಕ್ರಿಯವಾಗಿದ್ದರೇ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು. ಜನರ ನಿರೀಕ್ಷೆಯಂತೆ ಜನಸ್ನೇಹಿಯಾಗಿ ಕೆಲಸ ಮಾಡುತ್ತೇನೆ, ಇಲಾಖಾ ಅಧಿಕಾರಿಗಳೊಂದಿಗೆ ಹಾಗು ಸರಕಾರದ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡುತ್ತೇನೆ ಜನರ ಸಹಕಾರ ಇರಲಿ, ಜನಸಂಪರ್ಕ ಸಭೆ, ನೊಂದವರ ದಿನಾಚರಣೆ ಮೂಲಕ ಪೋಲಿಸ್ ಮತ್ತು ಸಾರ್ವಜನಿಕರ ನಡುವಿನ ಅಂತರ ಕಡಿಮೆ ಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ಜಿಲ್ಲೆಯ ಯಾವುದೇ ಭಾಗದ ಯಾವುದೇ ಜನರಿಗೆ ಸಮಸ್ಯೆಯಾದಾಗ ನೇರವಾಗಿ ನನ್ನನ್ನು ಸಂಪರ್ಕಿಸಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು. ಹಾಗೂ ಕಳೆದ ನಾಲ್ಕು ವರ್ಷದಿಂದ ನಿಂತು ಹೋಗಿರುವ ಎಸ್ಪಿ ಫೋನ್ ಇನ್ ಕಾರ್ಯಕ್ರಮದ ಬಗ್ಗೆ ಯೋಚಸಿ ತೀರ್ಮಾನ ಕೈ ಗೊಳ್ಳುತ್ತೇನೆ ಎಂದರು. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

ಸಾವರ್ಕರ್ ಬ್ಯಾನರ್ ಗಲಾಟೆ ವಿಚಾರ: ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾರ್ವಕರ್ ಮತ್ತು ನೇತಾಜಿಯವರ ಭಾವಚಿತ್ರ ಇರುವ ಬ್ಯಾನರ್ ಅಳವಡಿಸಿದ್ದು, ಈ ಬಗ್ಗೆ ಏನೇನು ಬೆಳವಣಿಗೆ ಆಗಿದೆ ಎಂಬುದನ್ನು ತಿಳಿದುಕೊಂಡು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

click me!