ಬೆಂಗಳೂರಿನ ಅರ್ಧದಷ್ಟು ಕಸ ಮರು ಬಳಕೆ : ಜಿಬಿಎ-ರಾಜ್ಯ ನಿರ್ವಹಣೆಯಲ್ಲಿ ಶೀಘ್ರ ಭಾರಿ ಬದಲಾವಣೆ

Kannadaprabha News   | Kannada Prabha
Published : Mar 10, 2026, 07:22 AM IST
Greater Bengaluru

ಸಾರಾಂಶ

ನಗರದ ಶೇ.45-50ರಷ್ಟು ತ್ಯಾಜ್ಯ ರಿಸೈಕ್ಲಿಂಗ್ ಆಗುತ್ತಿದೆ. ಮುಂದೆ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

ಬೆಂಗಳೂರು : ನಗರದ ಶೇ.45-50ರಷ್ಟು ತ್ಯಾಜ್ಯ ರಿಸೈಕ್ಲಿಂಗ್ ಆಗುತ್ತಿದೆ. ಮುಂದೆ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

ತ್ಯಾಜ್ಯವನ್ನು ವಿವಿಧ ರೀತಿಯಲ್ಲಿ ಮರುಬಳಕೆ ಸಮಸ್ಯೆಗೆ ಪರಿಹಾರ

ಸೋಮವಾರ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ಯಾಜ್ಯವನ್ನು ವಿವಿಧ ರೀತಿಯಲ್ಲಿ ಮರುಬಳಕೆ ಮಾಡುವ ಮೂಲಕ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಈ ಸಂಬಂಧ ಮುಂದಿನ 3–4 ವರ್ಷಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಣಾಮಕಾರಿ ಬದಲಾವಣೆಗಳನ್ನು ತರಲಾಗುವುದು ಎಂದರು.

ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಗೊಬ್ಬರವಾಗಿಸುವುದು,

ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಗೊಬ್ಬರವಾಗಿಸುವುದು, ಪ್ಲಾಸ್ಟಿಕ್ ಅನ್ನು ವಿದ್ಯುತ್ ಘಟಕಗಳಿಗೆ ಕಳುಹಿಸುವುದು, ಕಡಿಮೆ ಮೌಲ್ಯದ ಪ್ಲಾಸ್ಟಿಕ್ ಅನ್ನು ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸುವ ಮೂಲಕ ಇ.ಪಿ.ಆರ್ ಕ್ರೆಡಿಟ್ ಪಡೆಯಲಾಗುತ್ತಿದೆ. ಇದೇ ಮಾದರಿಯಲ್ಲಿ ವಿವಿಧ ಕಾರ್ಯಗಳಿಗೆ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವ ಮೂಲಕ ಲ್ಯಾಂಡ್‌ ಫಿಲ್‌ಗೆ ಕಳುಹಿಸುವ ಪ್ರಮಾಣವನ್ನು ಕ್ರಮೇಣ ಕಡಿಮೆ ಮಾಡಲು ಪ್ರಯತ್ನಗಳು ನಡೆದಿವೆ ಎಂದು ಆಯುಕ್ತರು ತಿಳಿಸಿದರು.

PREV
Read more Articles on
click me!

Recommended Stories

ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ: 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು
ರಾಜ್ಯಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಕ್ಕಟ್ಟು : ಲಾರಿ ಮಾಲೀಕರಿಗೆ ಸಂಕಷ್ಟ