ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸಂಸತ್ ಅಧಿವೇಶನದ ಸಮಯದಲ್ಲಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಬಸವನಗುಡಿಯ ಅಭಿನವ ವಿದ್ಯಾ ವಿಹಾರ ಸಭಾಂಗಣದಲ್ಲಿ ಶನಿವಾರ ನಡೆದ ‘ಚಿಂತನ ಮಂಥನ’ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು (ಜು.10): ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸಂಸತ್ ಅಧಿವೇಶನದ ಸಮಯದಲ್ಲಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಬಸವನಗುಡಿಯ ಅಭಿನವ ವಿದ್ಯಾ ವಿಹಾರ ಸಭಾಂಗಣದಲ್ಲಿ ಶನಿವಾರ ನಡೆದ ‘ಚಿಂತನ ಮಂಥನ’ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬ್ಯಾಂಕ್‌ನ ಅವ್ಯವಹಾರದ ಹಿನ್ನೆಲೆಯಲ್ಲಿ ಸಭೆ ಸೇರಿದ್ದ ನೂರಾರು ಠೇವಣಿದಾರರು ಮತ್ತು ಷೇರುದಾರರು ಸುಧೀರ್ಘವಾಗಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯ ಮಹಾ ಪೋಷಕ ಡಾ. ಶಂಕರ್‌ಗುಹಾ ದ್ವಾರಕನಾಥ್ ಬೆಳ್ಳೂರು ಈ ವಿಷಯ ಸ್ಪಷ್ಟಪಡಿಸಿದರು.
ಕೃಷಿ ವಿವಿಗಳಲ್ಲಿ ಸಮಗ್ರ ಮಾಹಿತಿ ಸಿಗಲಿ: ಶೋಭಾ ಕರಂದ್ಲಾಜೆ
ಬ್ಯಾಂಕ್‌ನ ಕೋಟ್ಯಂತರ ರುಪಾಯಿ ಹಗರಣ ಬೆಳಕಿಗೆ ಬಂದು ಎರಡೂವರೆ ವರ್ಷವಾದರೂ ಸರ್ಕಾರ ಸಂತ್ರಸ್ತರಿಗೆ ಇನ್ನೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಿಲ್ಲ. ಆದ್ದರಿಂದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ವಂಚನೆಗೆ ಒಳಗಾದವರಿಗೆ ಪರಿಹಾರ ನೀಡಬೇಕು ಎಂದು ಮುಂದಿನ ಸಂಸತ್ ಅಧಿವೇಶನದ ಸಮಯದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಬೇಡಿಕೆ ಈಡೇರದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಟ್ಟಾಗಿ ಹೋರಾಡೋಣ: ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಬ್ಯಾಂಕ್‌ಗೆ ಸಂಬಂಧಿಸಿದಂತೆ ಈಗಾಗಲೇ ಸಂಸತ್‌ನಲ್ಲಿ 3 ಬಾರಿ ಧ್ವನಿ ಎತ್ತಿದ್ದೇನೆ. ಇಲ್ಲಿ ಯಾವುದೇ ರಾಜಕೀಯವಾಗಲಿ, ಸ್ವಪ್ರತಿಷ್ಠೆ ಆಗಲಿ ಬೇಕಿಲ್ಲ. ಕ್ರೆಡಿಟ್ ಪಡೆಯಲೂ ಬಂದಿಲ್ಲ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಲಿದ್ದು, ನಿಮ್ಮಲ್ಲಿನ ಮಾಹಿತಿ ಪಡೆಯಲು ಆಗಮಿಸಿದ್ದೇನೆ. ಕನ್ನಡಿಗರಿಗೆ ಅನ್ಯಾಯವಾದರೆ ಕ್ಷಮಿಸುವುದಿಲ್ಲ. ಎಲ್ಲರೂ ಒಟ್ಟಾಗಿ ಹೋರಾಟ ನಡೆಸೋಣ ಎಂದು ಸ್ಪಷ್ಟಪಡಿಸಿದರು.
Bengaluru: ಸಂಸ್ಕೃತ ಕಲಿಕೆ ಪುನರುಜ್ಜೀವನಗೊಳಿಸಿ: ವೆಂಕಯ್ಯ ನಾಯ್ಡು
ಸಭೆಯಲ್ಲಿ ಆರ್‌ಬಿಐ ನಿವೃತ್ತ ಒಂಬಡ್ಸ್‌ಮನ್ ಪಳನಿ ಸ್ವಾಮಿ ಉಪಸ್ಥಿತರಿದ್ದರು. ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ಶ್ರೀ ಗುರು ಸಾರ್ವಭೌಮ ಸೌಹಾರ್ದ ಸಹಕಾರ ಬ್ಯಾಂಕ್, ಕಣ್ವ ಸೌಹಾರ್ದ ಸಹಕಾರ ಬ್ಯಾಂಕ್, ಸಿರಿ-ವೈಭವ ಸಹಕಾರ ಬ್ಯಾಂಕ್, ವಸಿಷ್ಟಸೌಹಾರ್ದ ಸಹಕಾರ ಬ್ಯಾಂಕ್, ಶ್ರೀ ಶೈಲಗಿರಿ ಸೌಹಾರ್ದ ಬ್ಯಾಂಕ್‌ನಲ್ಲಿ ವಂಚನೆಗೊಳಾಗದ ನೂರಾರು ಠೇವಣಿದಾರರು, ಷೇರುದಾರರು ಭಾಗವಹಿಸಿದ್ದರು.