ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಹಾಗಾಗಿ, ಶೀಘ್ರವೇ ಒಂದು ದಿನಾಂಕ ನಿಗದಿಪಡಿಸಿ ಮತ್ತೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುತ್ತೇವೆ ಎಂದು ಎಚ್ಚರಿಸಿದ ರಾಜ್ಯ ಸಭಾ ಸದಸ್ಯ ಈರಣ್ಯ ಕಡಾಡಿ
ಬೆಳಗಾವಿ(ಜ.30): ಒಂದು ಕಡೆ ಹನುಮ ಧ್ವಜ ಕಿತ್ತು ಅಪಮಾನ ಮಾಡುವ ಜತೆಗೆ ಅಲ್ಲಿ ನಿಯಮ ಬದ್ದವಾಗಿ ರಾಷ್ಟ್ರಧ್ವಜವನ್ನು ಹಾರಿಸದೇ ರಾಷ್ಟ್ರ ಧ್ವಜಕ್ಕೂ ಅಗೌರವ ತೋರಲಾಗಿದೆ. ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲೂ ಭಗವಾಧ್ವಜ ತೆರವುಗೊಳಿಸಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಈ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಹಾಗಾಗಿ, ಶೀಘ್ರವೇ ಒಂದು ದಿನಾಂಕ ನಿಗದಿಪಡಿಸಿ ಮತ್ತೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುತ್ತೇವೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಯ ಕಡಾಡಿ ಎಚ್ಚರಿಸಿದರು.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರ ಖಂಡಿಸಿ ರಾಜ್ಯಾಧ್ಯಂತ ಪ್ರತಿಭಟನೆಗೆ ವಿಪಕ್ಷನಾಯಕ ಆರ್. ಅಶೋಕ್ ಕರೆ ನೀಡಿದ ಹಿನ್ನೆಲೆ ಸೋಮವಾರ ಬೆಳಗಾವಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ಈ ವೇಳೆ ಅವರು ಮಾತನಾಡಿ, ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.
ಶಾಸಕ ಲಕ್ಷ್ಮಣ್ ಸವದಿ ಸಂವಿಧಾನ ಬದಲಾವಣೆ ಮಾತು! ಹೇಳಿದ್ದೇನು?
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಮಾತನಾಡಿ, ಅಭಿವೃದ್ಧಿ ಕೆಲಸ ಮಾಡುವುದು ಬಿಟ್ಟು ಜನರ ಧಿಕ್ಕು ತಪ್ಪಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.ಮುಂದೆ ಇಂಥಕೆಲಸಮಾಡಬಾರದು. ಇದೇ ಧೋರಣೆ ಮುಂದುವರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ನಡೆಸಿರುವ ಹಿಂದೂ ವಿರೋಧಿ ಕೃತ್ಯ ಖಂಡಿಸಿ ಹಾಗೂ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರಕ್ಕೆ ಇಂತಹ ಕೃತ್ಯ ಮಾಡದಂತೆ ಶಿಕ್ಷಣ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರವನ್ನು ವಜಾಮಾಡುವಂತೆ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಸದೆ ಮಂಗಲ ಅಂಗಡಿ, ಉಜ್ವಲಾ ಬಡವನಾಚೆ, ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮಹಾಂತೇಶ ವಕ್ಕುಂದ, ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಎಫ್.ಎಸ್.ಸಿದ್ದನಗೌಡರ ಬಿರಾದಾರ, ರಾಜಶೇಖರ ಡೋಣಿ, ಪ್ರಮೋದ ಕೊಚೇರಿ, ಮಲ್ಲಿಕಾರ್ಜುನ ಮಾದಮ್ಮನವರ ನೀತಿನ ಚೌಗಲೆ, ಸಂತೋಷ ದೇಶನೂರ, ಗಿರೀಶ ದೊಂಗಡಿ, ಮಹಾದೇವ ರಾಠೋಡ, ಹಣಮಂತ ಕೊಂಗಾಲಿ, ಲೀನಾ ಟೋಪಣ್ಣವರ, ವಿನಯ ಕದಂ, ಯಲ್ಲೇಶ ಕೊಲಕಾರ ಇದ್ದರುಸೇರಿ ಮತ್ತಿತರರು ಇದ್ದರು.