ಶ್ರೀನಿವಾಸಪ್ರಸಾದ್ ಬೆಂಬಲಿಗರಿಂದ ಬಿಜೆಪಿಗೆ ಖಡಕ್ ಎಚ್ಚರಿಕೆ

Published : Apr 12, 2024, 06:35 PM IST
 ಶ್ರೀನಿವಾಸಪ್ರಸಾದ್  ಬೆಂಬಲಿಗರಿಂದ ಬಿಜೆಪಿಗೆ ಖಡಕ್ ಎಚ್ಚರಿಕೆ

ಸಾರಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಕಡೆಗಣಿಸಿದರೆ ಏನಾಗುತ್ತದೆ ಎಂಬುದನ್ನು ಬಿಜೆಪಿಗೆ ತೋರಿಸುತ್ತೇವೆ ಎಂದು ವಿ. ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ಭರತ್ ರಾಮಸ್ವಾಮಿ ತಿಳಿಸಿದರು.

 ಮೈಸೂರು : ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಕಡೆಗಣಿಸಿದರೆ ಏನಾಗುತ್ತದೆ ಎಂಬುದನ್ನು ಬಿಜೆಪಿಗೆ ತೋರಿಸುತ್ತೇವೆ ಎಂದು ವಿ. ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ಭರತ್ ರಾಮಸ್ವಾಮಿ ತಿಳಿಸಿದರು.

ಶ್ರೀನಿವಾಸಪ್ರಸಾದ್ ಅವರ ಹಿರಿತನಕ್ಕೆ ಬಿಜೆಪಿ ತಕ್ಕ ಗೌರವ ಕೊಡಲಿಲ್ಲ. ಬಿಜೆಪಿಯವರು ಶ್ರೀನಿವಾಸಪ್ರಸಾದ್ ಅವರ ಜೊತೆ ನಡೆದುಕೊಂಡ ರೀತಿಯನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದೀಗ ಬಿಜೆಪಿ ನಾಯಕರು ಶ್ರೀನಿವಾಸಪ್ರಸಾದ್ ಬೆಂಬಲಿಗರಲ್ಲಿ ಗೊಂದಲ ಮೂಡಿಸಲು ಮುಂದಾಗಿದ್ದಾರೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಶ್ರೀನಿವಾಸಪ್ರಸಾದ್ ಅವರು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿಯವರು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ, ಶ್ರೀನಿವಾಸಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದಿದ್ದು, ತಟಸ್ಥವಾಗಿದ್ದಾರೆ. ಯಾವುದೇ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ನಾವು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಅವರ ಅಭಿಪ್ರಾಯ ಕೇಳಿದೇವು. ನಿಮ್ಮ ನಿರ್ಧಾರ ಉತ್ತಮವಾಗಿದೆ ಎಂದು ಹೇಳಿದರು. ಇದಾದ ಬಳಿಕವೇ ನಾವು ಕಾಂಗ್ರೆಸ್ ಪಕ್ಷವನ್ನು ಸೇರಿದೆವು. ಈ ಹಿಂದೆ ನಾವು ಕಾಂಗ್ರೆಸ್ ನಲ್ಲೇ ಇದ್ದವರು. ಮೈಸೂರು, ಚಾಮರಾಜನಗರ ಭಾಗದ ಶ್ರೀನಿವಾಸಪ್ರಸಾದ್ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ.

ವಿಧಾನಪರಿಷತ್ತು ಚುನಾವಣೆ, ಲೋಕಸಭಾ ಚುನಾವಣೆ ವೇಳೆ ಶ್ರೀನಿವಾಸಪ್ರಸಾದ್ ಅವರನ್ನು ಬಿಜೆಪಿಯವರು ಕಡೆಗಣಿಸಿದ್ದಾರೆ. ಹೀಗಾಗಿ, ಕಡೆಗಣಿಸಿರುವ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಅವರು ತಿಳಿಸಿದರು.

ಬಳಗದ ಸಿ.ಎಂ. ರಮೇಶ್, ಅಯ್ಯನಪುರ ಶಿವಕುಮಾರ್, ಶಾಂತರಾಮ್ ಶೆಟ್ಟಿ ಇದ್ದರು.

PREV
Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ