ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!

ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!

Published : Mar 26, 2026, 09:57 PM ISTUpdated : Mar 26, 2026, 10:00 PM IST
ಹಣ ಮತ್ತು ಗಾಂಜಾ ವಿಚಾರಕ್ಕಾಗಿ ಬೆಂಗಳೂರಿನ ಡೆಲಿವರಿ ಬಾಯ್ ವರುಣ್‌ನನ್ನು ಆತನ ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಟ್ಟುಹಾಕಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಸನ (ಮಾ.26): ಗಾಂಜಾ ನಶೆ ಹಾಗೂ ಹಣದ ವಿಚಾರಕ್ಕಾಗಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವರುಣ್ ಎಂಬ ಯುವಕ ತನ್ನದೇ ಸ್ನೇಹಿತರಿಂದ ಹತ್ಯೆಯಾಗಿದ್ದಾನೆ. ತಿಂಗಳಿಗೊಮ್ಮೆ ತನ್ನೂರಿಗೆ ಹೋಗುತ್ತಿದ್ದ ವರುಣ್, ಕಳೆದ ಬಾರಿ ಹೋದಾಗ ನಾಪತ್ತೆಯಾಗಿದ್ದ. 

ಸತ್ತಂತೆ ಕಥೆ ಕಟ್ಟಿದ್ದ ಹಾಸನದ ವಿವಾಹಿತೆ: ಪ್ರಿಯಕರ ಡೇವಿಡ್‌ಗೆ ಕೈ ಕೊಟ್ಟು ಗಂಡನ ಜೊತೆ ಹೋಗಲು ಒಪ್ಪಿದ ಪ್ರಿಯಾಂಕ!

ಮೂರು ದಿನಗಳ ನಂತರ ನಿರ್ಜನ ಪ್ರದೇಶದಲ್ಲಿ ಆತನ ಸುಟ್ಟ ಮೃತದೇಹ ಪತ್ತೆಯಾಗಿತ್ತು. ಪೊಲೀಸರ ತನಿಖೆಯಲ್ಲಿ ಹಂತಕ ಸ್ನೇಹಿತರ ಅಸಲಿ ಮುಖವಾಡ ಕಳಚಿದೆ. ವರುಣ್‌ನ ಸ್ನೇಹಿತ ಶಶಾಂಕ್, ಬೆಂಗಳೂರಿನಿಂದ ಗಾಂಜಾ (ಮಾಲ್) ತರುವಂತೆ ವರುಣ್ ಅಕೌಂಟ್‌ಗೆ 7 ಸಾವಿರ ರೂಪಾಯಿ ಹಾಕಿದ್ದ. ಆದರೆ ವರುಣ್ ಗಾಂಜಾವನ್ನೂ ತರದೆ, ಹಣವನ್ನೂ ಮರಳಿಸದೆ ಸತಾಯಿಸುತ್ತಿದ್ದ ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಶಶಾಂಕ್ ಮತ್ತು ಗ್ಯಾಂಗ್, ವರುಣ್‌ನನ್ನು ಕಿಡ್ನ್ಯಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಬೆಂಕಿ ಹಚ್ಚಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನಶೆಯ ಹವ್ಯಾಸಕ್ಕೆ ಬಲಿಯಾದ ವರುಣ್ ಕುಟುಂಬ ಬೀದಿಗೆ ಬಿದ್ದಿದೆ.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more