ಹಾಸನದಲ್ಲಿ ಅವಿವಾಹಿತ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

By Sathish Kumar KH  |  First Published May 9, 2024, 5:39 PM IST

ಹಾಸನದಲ್ಲಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. 


ಹಾಸನ (ಮೇ 09): ಹಾಸನದಲ್ಲಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ಘಟನೆ ನಡದಿದೆ. ಚನ್ನರಾಯಪಟ್ಟಣದ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿ ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ ಆಗಿದ್ದಾಳೆ. ಓದಿನಲ್ಲಿ ಮುಂದಿದ್ದ ದೀಪಾ ಸ್ಥಳೀಯವಾಗಿಯೇ ತನ್ನ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದಳು. ಆದರೆ, ಇಂದು ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರಲ್ಲಿ ಆಘಾತ ತಂದೊಡ್ಡಿದೆ.

Latest Videos

undefined

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಾಸಾಗಿದ್ದರೂ, ಫೇಲ್ ಆಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಆದರೆ, ದೀಪಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ದೀಪಾಗೆ 34 ವರ್ಷವಾಗಿದ್ದರೂ ಮದುವೆ ಮಾಡಿಕೊಂಡಿರಲಿಲ್ಲ. ಇದೇ ವಿಚಾರಕ್ಕೆ ಧುಡುಕಿನ ನಿರ್ಧಾರ ಕೈಗೊಂಡಿದ್ದಾರಾ ಎಂಬ ನಿಟ್ಟಿನಲ್ಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ತನಿಖೆ ನಂತರವೇ ಮಾಹಿತಿ ತಿಳಿದುಬರಬೇಕಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಬಂದು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

ಎಸ್‌ಎಸ್‌ಎಲ್‌ಸಿ ಫೇಲ್: ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ಚಿಕ್ಕೋಡಿ ವಿದ್ಯಾರ್ಥಿನಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಫೇಲಾಗಿದ್ದೇನೆಂದು ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ:   ಮಂಡ್ಯ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪಾಸ್ ಆಗಿದ್ರು ಫೇಲ್ ಎಂದು ತಪ್ಪಾಗಿ ಭಾವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ‌ ಆಗಿದ್ದಾಳೆ. ಮೃತ ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್‌ನಲ್ಲಿ ನೋಡಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

click me!