ಹಾಸನ ಮರ ಕಡಿತಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವಿಕ್ರಂ ಸಿಂಹ!

By Sathish Kumar KH  |  First Published Dec 31, 2023, 5:40 PM IST

ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿನ ಮರ ಕಡಿದ ಪ್ರಕರಣದಲ್ಲಿ ಬಂಧನವಾಗಿದ್ದ ವಿಕ್ರಂ ಸಿಂಹಗೆ ಜಾಮೀನು ಲಭ್ಯವಾಗಿದೆ.


ಹಾಸನ (ಡಿ.31): ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ 126 ಮರಗಳನ್ನು ಕಡಿದ ಪ್ರಕರಣದಲ್ಲಿ ಬಂಧಿತವಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರಿಗೆ ಜಾಮೀನು ಲಭ್ಯವಾಗಿದ್ದು, ಅರಣ್ಯ ಇಲಾಖೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. 

ಬೇಲೂರಿನ ನಂದಗೊಂಡನಹಳ್ಳಿಯ ಮರ ಕಡಿದ ಪ್ರಕರಣದಲ್ಲಿ ಬಂಧನವಾಗಿದ್ದ ವಿಕ್ರಂ ಸಿಂಹಗೆ ಜಾಮೀನು ಲಭ್ಯವಾಗಿದೆ. ಅರಣ್ಯ ಇಲಾಖೆ ತನಿಖಾ ತಂಡದಿಂದ ಬೇಲೂರಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ನಾಯ್ಕ್ ಎದುರು ಹಾಜರು ಪಡಿಸಿದ್ದರು. ವಿಕ್ರಂ ಸಿಂಹ ಪರವಾಗಿ ಹಾಜರಾಗಿ ಜಾಮೀನು ಅರ್ಜಿ ಹಾಕಿದ್ದ ವಕೀಲ ಚಂದ್ರೇಗೌಡ, ಧರ್ಮೇಗೌಡ ಅವರು ನ್ಯಾಯಾಲಯದಲ್ಲಿ ವಾದ ಮಮಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Latest Videos

undefined

ಡಿ.ಕೆ.ಶಿವಕುಮಾರ್‌ ಚಿಕ್ಕವನಾದ್ರೂ ಸಂಘಟನೆಯಲ್ಲಿ ನನಗಿಂತಲೂ ಮುಂದಿದ್ದಾರೆ: ಸಿಎಂ ಸಿದ್ದರಾಮಯ್ಯ

ಇನ್ನು ನಂದಗೋಡನಹಳ್ಳಿ ಅಕ್ರಮ ಮರಗಳ ಕಡಿತ ಪ್ರಕರಣದ ಆರೋಪಿ ವಿಕ್ರಂ ಸಿಂಹಗೆ ಜಾಮೀನು ಮಂಜೂರಾದ ಬಳಿಕ ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡೊದ ಅವರು, ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ. ತುಂಬಾ ಖುಷಿಯಾಗಿದೆ. ನಾನು ಬರೀ ಶುಂಠಿ ಬೆಳೆ ಬೆಳೆಯಲು ಹೋಗಿದ್ದವನು. ಬೆಳೆ ಬೆಳೆಯಲು ಹೋದವನಿಗೆ ಈ ರೀತಿ ಆಪಾದನೆಗಳೆಲ್ಲವನ್ನು ಎದುರಿಸಬೇಕಾಗಿ ಬಂತು. ಇದೊಂದು ರೀತಿ ರಾಜಕೀಯ ಪಿತೂರಿಯಾಗಿದೆ. ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ. ಇನ್ನೇನು ಹೇಳುವುದಿಲ್ಲ ಎಂದು ಹೇಳಿದರು.

ವಿಕ್ರಂ ಸಿಂಹ ಪತ್ತೆಗೆ ಪೊಲೀಸರ ಮೊರೆ ಹೋಗಿದ್ದ ಅರಣ್ಯ ಇಲಾಖೆ: ಕೋಟ್ಯಂತರ ರೂ.ಮೌಲ್ಯದ ಮರಗಳನ್ನು ಕಡಿದು ಮಾರಾಟ ಮಾಡಿರುವ ಆರೋಪ ಹಿನ್ನೆಲೆ ಮೈಸೂರು ಕೊಡುಗು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದರು. ಹಾಸನ ಭಾಗದಲ್ಲಿ 126 ಮರಗಳನ್ನ ಕಡಿದು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಂ ಸಿಂಹ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹೇಳಿಕೆ ಪಡೆಯಲು ವಿಕ್ರಂ ಸಿಂಹರನ್ನು ಸಂಪರ್ಕಿಸಲು ಯತ್ನಿಸಿದ್ದ ಅರಣ್ಯಾಧಿಕಾರಿಗಳು. ಆದರೆ ತನಿಖಾಧಿಕಾರಿಗಳಿಗೆ ಸಂಪರ್ಕಕ್ಕೆ ಸಿಗದೇ ತಲೆಮರೆಸಿಕೊಂಡಿದ್ದ ವಿಕ್ರಂ ಸಿಂಹ. ಹೀಗಾಗಿ ಅರಣ್ಯಾಧಿಕಾರಿಗಳು ವಿಕ್ರಂ ಸಿಂಹ ಅವರನ್ನು ಹುಡುಕಾಟ ನಡೆಸಿದ್ದರು. 

ತಿಹಾರ್ ಜೈಲಿನಲ್ಲಿದ್ದಾಗ ಸೋನಿಯಾಗಾಂಧಿ ಹೇಳಿದಂತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತಂದಿದ್ದೇನೆ!

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಬಂಧನ: ಹಾಸನದಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಕಲೆಹಾಕಿದ್ದ ಅರಣ್ಯಾಧಿಕಾರಿಗಳು. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳನ್ನು ಸಹಕಾರ ಕೇಳಿದ್ದರು. ಅದರಂತೆ ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಸಂಘಟಿಕ ಅಪರಾಧ ವಿಭಾಗ ಸಿಬ್ಬಂದಿ. ಪೊಲೀಸ್ ಸಿಬ್ಬಂದಿ  ಸಹಾಯ ಪಡೆದು ವಿಕ್ರಂ ಸಿಂಹ ಬಂಧಿಸಲಾಗಿತ್ತು. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ ಸಿಸಿಬಿ ಪೊಲೀಸರು. ಹಾಸನ ಅರಣ್ಯಾಧಿಕಾರಿಗಳ ಬಂಧನದಲ್ಲಿರೋ ವಿಕ್ರಂ ಸಿಂಹ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದಾರೆ.

click me!