ಹಾಸನ: ರೇವಣ್ಣ ಆರೋಪಕ್ಕೆ ಬೇಸತ್ತು ಸ್ವಯಂ ವರ್ಗಾವಣೆ ಕೋರಿದ ಡಿವೈಎಸ್ಪಿ ಉದಯ್ ಭಾಸ್ಕರ್

By Girish Goudar  |  First Published Apr 2, 2023, 11:40 AM IST

ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದ್ದ ಜೆಡಿಎಸ್‌ ನಾಯಕ ಹೆಚ್.ಡಿ ರೇವಣ್ಣ. 


ಹಾಸನ(ಏ.02):  ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಜೆಡಿಎಸ್‌ ನಾಯಕ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆಯಲ್ಲಿ ಮನನೊಂದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆ ಕೋರಿದ್ದಾರೆ. 

Latest Videos

undefined

ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನಾಗಿದ್ದೇನೆ. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನಾನು ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಅಂತ ಉದಯ್ ಭಾಸ್ಕರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಹಾಸನ ಟಿಕೆಟ್‌ ಬಿಕ್ಕಟ್ಟು: ಇಂದು ಎಚ್‌ಡಿಕೆ-ರೇವಣ್ಣ ಸಂಧಾನ?

ತಾತ್ಕಾಲಿಕ ವರ್ಗಾವಣೆ ಕೋರಿ ಉದಯ್ ಭಾಸ್ಕರ್ ಅವರು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರೇವಣ್ಣ ಆರೋಪಕ್ಕೆ ಬೇಸತ್ತು ಡಿವೈಎಸ್ಪಿ ಉದಯ್ ಭಾಸ್ಕರ್ ಸ್ವಯಂ ವರ್ಗಾವಣೆ ಕೋರಿದ್ದಾರೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!