
ಹಾಸನ(ಜು.18) ಧರ್ಮಸ್ಥಳದಿಂದ ಕೋಲಾರಕ್ಕೆ ಬೇಲೂರು ಮಾರ್ಗವಾಗಿ ತೆರಳುವ ಸಂದರ್ಭ ಬೇಲೂರು ಬಸ್ ನಿಲ್ದಾಣದಲ್ಲಿ ಕಾಫಿಗೆ ತೆರಳಿದಾಗ ನಿರ್ವಾಹಕ ಆದಿನಾರಾಯಣ( 46) ಕುಸಿದುಬಿದ್ದಿದ್ದಾರೆ.
ಹೃದಯಾಘಾತಕ್ಕೆ ಒಳಗಾದ ನಿರ್ವಾಹಕರನ್ನು ತಕ್ಷಣ ಬೇಲೂರು ಸರ್ಕಾರಿ ಆಸ್ಪತ್ರೆಯಗೆ ದಾಖಲು ಮಾಡಲಾಗಿದೆ. ಆದರೆ ಆಸ್ಪತ್ರೆ ಸೇರಿಸುವ ಮುನ್ನವೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಬೇಲೂರು ಆಸ್ಪತ್ರೆಗೆ ಚಿಕ್ಕಮಗಳೂರು ವಿಭಾಗಿಯ ನಿಯಂತ್ರಣ ಅಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಆದಿನಾರಾಯಣ ಅವರ ಪಾರ್ಥಿವ ಶರೀರವನ್ನು ಹುಟ್ಟೂರು ಕೋಲಾರಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ.