
ಹಾವೇರಿ (ಫೆ.7): ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ. ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೇಟ್ ಕಟ್ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಇನ್ನೋರ್ವ ವ್ಯಕ್ತಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಸಾವು ಕಂಡಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೋಪುರದ ಮೇಲೆ ಇಡುವ ಕಳಸ ಹಿಡಿದು ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಹತ್ತಿರ ಹೋಗುತ್ತಿದ್ದಂತೆ ಕ್ರೇನ್ ಬಕೆಟ್ ಕಳಚಿ ಬಿದ್ದಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಹುಶಃ ಕಳಸ ಎದೆಗೆ ಚುಚ್ಚಿಯೇ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Haveri: ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ನರ್ಸ್!
ವೈದ್ಯರು ಓವರ್‌ಡೋಸ್ ಇಂಜೆಕ್ಷನ್ ನೀಡಿದ ಆರೋಪ; ಹೊಟ್ಟೆನೋವು ಅಂತಾ ಬಂದು ಜೀವ ಬಿಟ್ಟ ಮಹಿಳೆ!