ನಂಜನಗೂಡಿನಲ್ಲಿ ವೈದ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇದೀಗ ಮತ್ತೋರ್ವ ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾವೇರಿ (ಆ.24): ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲಿಯೇ ಹಾವೇರಿಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಅಪಘಾತಕ್ಕೀಡಾದವರ ಉಚಿತ ಚಿಕಿತ್ಸೆಗಾಗಿ ಟೋಲ್ ಬೆಲೆ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ!...
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಲ್ಲಿಯ ಬಸವೇಶ್ವರ ನಗರದ ಡಾ.ಜಗದೀಶ್ ಗೊಡ್ಡಮ್ಮಿ(47) ಮೃತ ವೈದ್ಯ. ಇವರು ಕಿವಿ, ಮೂಗು, ಗಂಟಲು ತಜ್ಞ ವೈದ್ಯರಾಗಿದ್ದರು.
ತಮ್ಮದೆ ಆಸ್ಪತ್ರೆ ಹೊಂದಿದ್ದರು. ಭಾನುವಾರ ಬೆಳಗಿನ ಜಾವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ.