ರೈತ ಸಂಪರ್ಕ ಕೇಂದ್ರದಲ್ಲಿ ಸೋಯಾಬೀನ್, ಶೇಂಗಾ, ಹೆಸರು ಬೀಜವನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ ಬಾರಿ ತೀವ್ರ ಬರಗಾಲದಿಂದ ಬೇಸತ್ತು ಹೋಗಿದ್ದರು. ಈಗ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದರಿಂದ ಬಿತ್ತನೆ ಬೀಜಕ್ಕಾಗಿ ರೈತರು ಕ್ಯೂ ನಿಂತು ಬಿತ್ತನೆ ಬೀಜ ಖರೀದಿ ಮಾಡುತ್ತಿದ್ದಾರೆ.
ಹಾವೇರಿ(ಮೇ.22): ಕಳೆದ ವರ್ಷ ಹಾವೇರಿ ಜಿಲ್ಲೆಯ ಅನ್ನದಾತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಕಂಗಾಲಗಿದ್ದರು. ಅದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಘಟನೆ ಮಂಗಳವಾರ ಹಾವೇರಿಯ ರೈತ ಸಂಪರ್ಕ ಕೇಂದ್ರ ಮುಂದೆ ನಡೆದಿದೆ.
ರೈತ ಸಂಪರ್ಕ ಕೇಂದ್ರದಲ್ಲಿ ಸೋಯಾಬೀನ್, ಶೇಂಗಾ, ಹೆಸರು ಬೀಜವನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ ಬಾರಿ ತೀವ್ರ ಬರಗಾಲದಿಂದ ಬೇಸತ್ತು ಹೋಗಿದ್ದರು. ಈಗ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದರಿಂದ ಬಿತ್ತನೆ ಬೀಜಕ್ಕಾಗಿ ರೈತರು ಕ್ಯೂ ನಿಂತು ಬಿತ್ತನೆ ಬೀಜ ಖರೀದಿ ಮಾಡುತ್ತಿದ್ದಾರೆ. ಗದ್ದಲದ ನಡುವೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ. ರೈತರು ಹೆಚ್ಚಿನ ಕೌಂಟರ್ ಓಪನ್ ಮಾಡಿ ಬೀಜ ವಿತರಣೆ ಮಾಡಲು ಆಗ್ರಹಿಸಿದ್ದಾರೆ.
undefined
ಯಾರು ಏನೇ ಹೇಳಲಿ, ದೇಶದಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೆ: ಬೊಮ್ಮಾಯಿ
ಬಿತ್ತನೆ ಬೀಜ, ರಸಗೊಬ್ಬರಕ್ಕೆ ವ್ಯವಸ್ಥೆ ಮಾಡಿ: ಸಿಎಂ ಅಪ್ಪಣೆ
ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
‘ಎಲ್ಲೆಡೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ಬಿತ್ತನೆ ಬೀಜ, ರಸ ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
‘ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು ರಾಜ್ಯದಲ್ಲಿ ದಾಸ್ತಾನಿರುವ ಬಿತ್ತನೆ ಬೀಜ, ರಸ ಗೊಬ್ಬರದ ಕುರಿತು ಮಾಹಿತಿ ಪಡೆದುಕೊಳ್ಳಿ. ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ’ ಎಂದು ಸಚಿವ ಚಲುವರಾಯಸ್ವಾಮಿ ಅವರಿಗೆ ಸಿದ್ದರಾಮಯ್ಯ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.