ಶ್ರದ್ಧಾಂಜಲಿ ಸಲ್ಲಿಸುವಾಗ ಪಾಕ್‌ ಪರ ಘೋಷಣೆ ಕೂಗಿದ

Published : Feb 17, 2019, 10:13 AM IST
ಶ್ರದ್ಧಾಂಜಲಿ ಸಲ್ಲಿಸುವಾಗ ಪಾಕ್‌ ಪರ ಘೋಷಣೆ ಕೂಗಿದ

ಸಾರಾಂಶ

ಹುತಾತ್ಮ ಯೋಧರಿಗೆ ನಮನ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದ ವೇಳೆ ಹಾವೇರಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

ಹಾವೇರಿ: ಜಮ್ಮು- ಕಾಶ್ಮೀರದಲ್ಲಿ ಉಗ್ರರ ಬಾಂಬ್‌ ದಾಳಿಗೆ ಹುತಾತ್ಮರಾದ ಯೋಧರಿಗೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

 ಗ್ರಾಮದ ಮಹ್ಮದ್‌ ಅಲಿ (45) ಬಂಧಿತ ವ್ಯಕ್ತಿ. ಈತ ಗ್ರಾಮದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ. 

ಈ ವೇಳೆ ಸ್ಥಳೀಯರು ಘೋಷಣೆ ಕೂಗಿದ ವ್ಯಕ್ತಿಯನ್ನು ಹಿಗ್ಗಾ ಮುಗ್ಗಾ ಥಳಿಸಿ ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈ ಕುರಿತು ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ: ಶಾಸಕರಿಂದಲೇ ವೆಚ್ಚ
Yashodhara Vaddar Death: ತರಬೇತಿ ವೇಳೆ ಗುಂಡು ತಗುಲಿ ಹಾನಗಲ್ಲ ಮೂಲದ ನೌಕಪಡೆಯ ಯೋಧ ಸಾವು