ಅನಗತ್ಯವಾಗಿ ನನ್ನ ಮಗನ ಮೇಲೆ FIR ದಾಖಲು : HD ರೇವಣ್ಣ

Published : Dec 06, 2019, 09:07 AM IST
ಅನಗತ್ಯವಾಗಿ ನನ್ನ ಮಗನ ಮೇಲೆ FIR ದಾಖಲು : HD ರೇವಣ್ಣ

ಸಾರಾಂಶ

ಅನವಶ್ಯಕವಾಗಿ ನನ್ನ ಮಗನ ಮೇಲೆಎಫ್ ಐ ಆರ್ ದಾಖಲು ಮಾಡಲಾಗಿದ್ದು ಈ ನಿಟ್ಟಿನಲ್ಲಿ ಎಎಸ್‌ಐ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಹೇಳಿದರು. 

ಚನ್ನರಾಯಪಟ್ಟಣ (ಡಿ.06):  ನಂಬಿಹಳ್ಳಿ ಗ್ರಾಮದಲ್ಲಿ ಘರ್ಷಣೆ ನಡೆದ ಸಂದರ್ಭದಲ್ಲಿ ನನ್ನ ಮಗ ಸೂರಜ್‌ ರೇವಣ್ಣ ಸ್ಥಳದಲ್ಲಿಲ್ಲದಿದ್ದರೂ ಅನಗತ್ಯವಾಗಿ ಪ್ರಕರಣ ದಾಖಲಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಚನ್ನರಾಯಪಟ್ಟಣ ಗ್ರಾಮೀಣ ಪೊಲೀಸ್‌ ಠಾಣೆಯ ಎಎಸ್‌ಐ ದೇವರಾಜಯ್ಯ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಬಿಜೆಪಿ ಸದಸ್ಯ ಆನಂದ್‌ ಹೊಸೂರು ಸೇರಿ ಇತರೆ ಬಿಜೆಪಿ ಕಾರ್ಯಕರ್ತರು ಚುನಾವಣಾ ಪ್ರಚಾರ ಮುಗಿಸಿಕೊಂಡು ಬೆಂಗಳೂರಿಗೆ ತೆರಳಬೇಕಿತ್ತು. ಅವರಿಗೆ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿನ ನಂಬಿಹಳ್ಳಿಯಲ್ಲಿ ಏನು ಕೆಲಸ ಇತ್ತು. ಕೆ.ಆರ್‌. ಪೇಟೆ ಚುನಾವಣೆ ಆರಂಭವಾದಾಗಿನಿಂದ ಇದುವರೆಗೆ ನಡೆದಿರುವ ಘಟನೆಯ ಬಗ್ಗೆ ಚುನಾವಣಾ ವೀಕ್ಷಕರಿಗೆ ಪಟ್ಟಣದಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಸಿ.ಎನ್‌. ಬಾಲಕೃಷ್ಣ, ತಾಲ್ಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ದೇವರಾಜೇಗೌಡ ಇದ್ದರು.

ಮದ್ಯಪಾನ ಮಾಡಿ ಜೀವ ಉಳಿಸಿ; ಹಾಸನ ಪೊಲೀಸ್ರಿಗೆ ತಪ್ಪು ಬ್ಯಾರಿಕೇಡ್ ಸಂಕಷ್ಠ!...

ನಂಬಿಹಳ್ಳಿ ಗ್ರಾಮದಲ್ಲಿ ಪರಿಸ್ಥಿತಿ ಶಾಂತ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ನಂಬಿಹಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ತಾಲೂಕಿನಲ್ಲಿ ಬುಧವಾರ ರಾತ್ರಿ 10ರಿಂದ ಗುರುವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಘಟನೆ ನಡೆದ ನಂಬಿಹಳ್ಳಿ ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುನಾವಣೆ ಆರಂಭವಾದಾಗಿನಿಂದ ಇದುವರೆಗೆ ನಡೆದಿರುವ ಘಟನೆ ಕುರಿತು ಶಾಸಕರಾದ ಎಚ್‌.ಡಿ. ರೇವಣ್ಣ, ಸಿ.ಎನ್‌. ಬಾಲಕೃಷ್ಣ ಗುರುವಾರ ಪಟ್ಟಣದಲ್ಲಿರುವ ಪ್ರವಾಸಿ ಮಂದಿರಕ್ಕೆ ತೆರಳಿ ಚುನಾವಣಾ ವೀಕ್ಷಕ ಮೌನೀಷ್‌ ಮುದ್ಗಲ್‌ ಅವರಿಗೆ ಮನವಿ ಸಲ್ಲಿಸಿದರು.

PREV
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಬೆಂಗಳೂರಿನ ಗುಲಾಬಿ ಮೆಟ್ರೋ ಮಾರ್ಗಕ್ಕೆ ಶೀಘ್ರ ಪ್ರೊಟೊಟೈಪ್‌ ರೈಲು