ಸರ್ವರಿಗೂ ಸಮಪಾಲು ಎಂಬ ಧ್ಯೇಯ ವಾಕ್ಯದೊಂದಿಗೆ ಆಡಳಿತ ನಡೆಸಿ ಜನ ಮೆಚ್ಚಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಮೇಲೆ ಜನಸಾಮಾನ್ಯರಿಗೆ ಹೆಚ್ಚು ವಿಶ್ವಾಸ ಮೂಡುತ್ತಿದ್ದು ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಆಡಳಿತದ ಚುಕ್ಕಾಣಿ ಹಿಡಿಯಲಿ ಎಂದು ತಾಲೂಕು ರಾಜ್ಯ ಜೆಡಿಎಸ್ ಪರಿಷತ್ ಸದಸ್ಯರು ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್ ಹೇಳಿದರು.
ಶಿರಾ : ಸರ್ವರಿಗೂ ಸಮಪಾಲು ಎಂಬ ಧ್ಯೇಯ ವಾಕ್ಯದೊಂದಿಗೆ ಆಡಳಿತ ನಡೆಸಿ ಜನ ಮೆಚ್ಚಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಮೇಲೆ ಜನಸಾಮಾನ್ಯರಿಗೆ ಹೆಚ್ಚು ವಿಶ್ವಾಸ ಮೂಡುತ್ತಿದ್ದು ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಆಡಳಿತದ ಚುಕ್ಕಾಣಿ ಹಿಡಿಯಲಿ ಎಂದು ತಾಲೂಕು ರಾಜ್ಯ ಜೆಡಿಎಸ್ ಪರಿಷತ್ ಸದಸ್ಯರು ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್ ಹೇಳಿದರು.
ತಾಲೂಕಿನ ಹುಲಿಕುಂಟೆ ಹೋಬಳಿಯ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದ ಶಿವನ ದೇವಸ್ಥಾನದ ನಂದಿ ಧ್ವಜ ಸ್ತಂಭ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಜಗತ್ತಿನ ಮನುಕುಲಕ್ಕೆ ಒಳಿತನ್ನು ಮಾಡುವ ಸಂಕಲ್ಪದೊಂದಿಗೆ ವಿಷವನ್ನೇ ಕುಡಿದು ನಂಜುಂಡನಾದ ಶಿವನ ಆದರ್ಶ ಗುಣ ಇಂದಿನ ಸಮಾಜಕ್ಕೆ ಅನಿವಾರ್ಯವಾಗಿದ್ದು, ಮತ್ತೊಬ್ಬರ ಕಷ್ಟಸುಖಗಳಿಗೆ ಸ್ಪಂದಿಸಿ ಕೆಲಸ ಮಾಡಿದಾಗ ನಮ್ಮ ಜನಸೇವೆ ಸಾರ್ಥಕತೆ ಕಾಣಲಿದೆ. ರೈತ ಬೆಳೆದಂತಹ ಬೆಳೆಗೆ ಉತ್ತಮ ಬೆಲೆ ಸಿಗಬೇಕು, ಶಿರಾ ಕ್ಷೇತ್ರದ ಜನತೆ ಸದಾ ಆರೋಗ್ಯಮಯ ಬದುಕು ಸಾಗಿಸಬೇಕು. ಯಾವುದೇ ಸಂಕಷ್ಟಗಳು ಬಾರದಂತೆ ಕರುಣಿಸು ಎಂದು ಜಗತ್ತು ರಕ್ಷಕ ಈಶ್ವರನಲ್ಲಿ ಬೇಡುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ಸಮಾಜ ಸೇವಕ ಕ್ಯಾದಿಗುಂಟೆ ತಿಪ್ಪೇಸ್ವಾಮಿ, ಮೀನಾಕ್ಷಿ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್ , ಜೆಡಿಎಸ್ ಮುಖಂಡ ಮಾನಂಗಿ ರಾಮು, ಡೈರಿರಂಗನಾಥ್, ಶ್ರೀನಿವಾಸ, ತಿಮ್ಮರಾಜು ಟಿ, ಅಶ್ವತ್‌್ಥ ನಾರಾಯಣ, ಚಂದ್ರೇಗೌಡ, ಕೆ.ಸಿ. ರಂಗನಾಥ, ಕಿರಣ್ ಕುಮಾರ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
12ಶಿರಾ1: ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದ ಶಿವನ ದೇವಸ್ಥಾನದ ನಂದಿ ಧ್ವಜ ಸ್ತಂಭ ಪ್ರತಿಷ್ಠಾಪನ ಮಹೋತ್ಸವದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್ ಭಾಗವಹಿಸಿ ಪೂಜೆ ಸಲ್ಲಿಸಿದರು.
jds ಅಧಿಕಾರಕ್ಕೆ ಬರಲ್ಲ
ಮದ್ದೂರು : ಮುಂಬರುವ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಅದು ಕೇವಲ ಕನಸು. ಭ್ರಷ್ಟಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನರು ನಿರ್ಧರಿಸಿದ್ದಾರೆ. ರಾಜ್ಯ, ರಾಷ್ಟ್ರದ ಹಿತ ಕಾಪಾಡಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ದೇಶದ ಜನ ಸಾಮಾನ್ಯರು ಹಾಗೂ ರೈತರ ಬದುಕಿಗೆ ಬದಲಾವಣೆ ತರುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಸಮುದ್ರ ಪಾಲಾಗುವ ಕಾವೇರಿ ನೀರನ್ನು ಉಳಿಸಲು ಮೇಕೆದಾಟು ಯೋಜನೆ ಜಾರಿಗೊಳಿಸುವ ಅವಶ್ಯಕತೆ ಇದೆ. ಈ ಬಗ್ಗೆ ತಾಂತ್ರಿಕವಾಗಿ ಚರ್ಚೆ ಮಾಡಿದ್ದೇನೆ. ಈ ಯೋಜನೆ ಪೂರ್ಣ ಮಾಡುವ ಜವಾಬ್ದಾರಿ ಡಿ.ಕೆ.ಶಿವಕುಮಾರ್ ಮೇಲಿದೆ ಎಂದರು.
ಬಿಜೆಪಿ ಸರ್ಕಾರಕ್ಕೆ ಭ್ರಷ್ಟಸರ್ಕಾರ ಎಂಬ ಹೆಸರು ಬಂದಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನರ ಆದಾಯ ಮಾತ್ರ ಹಾಗೇ ಇದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಲಾಗದೆ, ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸದ ಸರ್ಕಾರ ಅಧಿಕಾರದಲ್ಲಿರಬೇಕೆ ಎಂದು ಪ್ರಶ್ನಿಸಿದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರಲಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಒಂದೇ ಕಾರಣಕ್ಕೆ 37 ಜನ ಶಾಸಕರಿದ್ದ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ಆದರೆ, ಅಧಿಕಾರವನ್ನು ಉಳಿಸಿಕೊಳ್ಳಲಾಗದೆ ಕುಮಾರಸ್ವಾಮಿ ಕೈಚೆಲ್ಲಿದರು. ಸಮರ್ಥ ಆಡಳಿತದೊಂದಿಗೆ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವಲ್ಲಿ ವಿಫಲರಾದರು ಎಂದು ದೂಷಿಸಿದರು.