ನ್ಯೂ ಇಯರ್ ಸೆಲೆಬ್ರೆಟ್ ಮಾಡಿದ ವಿದ್ಯಾರ್ಥಿಗಳ ಮೇಲೆ ಹೆಡ್‌ಮಾಸ್ಟರ್‌ನಿಂದ ಥಳಿತ

By Suvarna NewsFirst Published Jan 3, 2020, 12:29 PM IST
Highlights

ಹೊಸ ವರ್ಷಾಚರಣೆ ಮಾಡಿದ ವಿದ್ಯಾರ್ಥಿಗಳ ಮೇಲೆ ಶಾಲಾ ಮುಖ್ಯೋಪಾಧ್ಯಾಯನಿಂದ ಥಳಿತ| ಧಾರವಾಡದ ಯುಪಿಎಸ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಘಟನೆ|20 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮುಖ್ಯೋಪಾಧ್ಯಾಯ ವೀರಣ್ಣ ಬೋಳಶೆಟ್ಟಿಯಿಂದ ಹಲ್ಲೆ|

ಧಾರವಾಡ [ಜ.03]: ಹೊಸ ವರ್ಷಾಚರಣೆ ಮಾಡಿದ ವಿದ್ಯಾರ್ಥಿಗಳ ಮೇಲೆ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮನಬಂದಂತೆ ಥಳಿಸಿದ ಘಟನೆ  ನಗರದ ಯುಪಿಎಸ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ. ಜನೆವರಿ 1 ರಂದು ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. 

ಜನೆವರಿ 1 ರಂದು ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ನ್ಯೂ ಇಯರ್ ಸೆಲೆಬ್ರೆಷನ್ ಮಾಡಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಮುಖ್ಯೋಪಾಧ್ಯಾಯ ವೀರಣ್ಣ ಬೋಳಶೆಟ್ಟಿ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ಮೆರೆದಿದ್ದಾನೆ. ಯುಪಿಎಸ್ ಶಾಲೆಯ 8  ತರಗತಿಯ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮುಖ್ಯೋಪಾಧ್ಯಾಯ ವೀರಣ್ಣ ಬೋಳಶೆಟ್ಟಿ ಮನಬಂದತೆ ಥಳಿಸಿದ್ದಾನೆ.  ವಿದ್ಯಾರ್ಥಿಗಳ ತಲೆ, ಬೆನ್ನು, ಕಾಲು, ಕೆನ್ನೆ ಮೇಲೆಲ್ಲ ಬಾಸುಂಡೆ ಬರುವಂತೆ ಥಳಿಸಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವಿದ್ಯಾರ್ಥಿಗಳು ನ್ಯೂ ಇಯರ್ ಸೆಲೆಬ್ರೆಟ್ ಮಾಡಲು ಕ್ಲಾಸ್ ನಲ್ಲಿ ಬೆಂಚ್ ಜೋಡಿಸಿ ಡೆಕೋರೆಷನ್ ಮಾಡಿ ಕೇಕ್ ಕಟ್ ಮಾಡಿದ್ದರು. ಇದನ್ನು ನೋಡಿ ಸಿಟ್ಟಿಗೆದ್ದ ಮುಖ್ಯೋಪಾಧ್ಯಾಯ ವೀರಣ್ಣ ಬೋಳಶೆಟ್ಟಿ  ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ಮೆರೆದಿದ್ದಾನೆ. ವಿದ್ಯಾರ್ಥಿಗಳು ತಮ್ಮ ಕ್ಲಾಸ್ ಟೀಚರ್ ಕಡೆಯಿಂದಲೇ ಕೇಕ್ ಕಟ್ ಮಾಡಿ ಖುಷಿ ಪಟ್ಟಿದ್ದರು. ಹಲ್ಲೆಗೊಳಗಾದ ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿಗಳಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

click me!