ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

By Kannadaprabha News  |  First Published Jan 13, 2023, 6:33 AM IST

ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುವ ಅಕುಶಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.


 ಮೈಸೂರು (ಜ. 13):  ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುವ ಅಕುಶಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಮಹಾತ್ಮಗಾಂಧಿ ನರೇಗಾ ಯೋಜನೆಯ ಐಇಸಿ ಚಟುವಟಿಕೆಯಡಿ ರಾಜ್ಯಾದಾದ್ಯಂತ ಶಿಬಿರ ಕೈಗೊಳ್ಳಲಾಗಿದ್ದು, ಇದರನ್ವಯ ಸರಗೂರು ತಾಲೂಕಿನ 13 ಗ್ರಾಪಂಗಳಲ್ಲಿ ಆರೋಗ್ಯ ಅಮೃತ ಅಭಿಯಾನ ಹಾಗೂ ನರೇಗಾ ಯೋಜನೆಯ ಸಹಯೋಗದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ, ಆರೋಗ್ಯ ಇಲಾಖೆ ಸಿಬ್ಬಂದಿ ಸಹಯೋಗದಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ರಕ್ತದಲ್ಲಿ ಹಿಮೋಗ್ಲೋಬಿನ್‌ ಪ್ರಮಾಣ, ತೂಕ, ಶೀತ, ಕೆಮ್ಮು, ನೆಗಡಿಯಂತಹ ಖಾಯಿಲೆ ತಪಾಸಣೆ ನಡೆಸಲಾಯಿತು. ಹೆಚ್ಚಿನ ಆರೋಗ್ಯ ಸಮಸ್ಯೆ ಕಂಡುಬಂದ ವ್ಯಕ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗೆ ಸೂಚಿಸಲಾಯಿತು.

Latest Videos

undefined

ತಾಲೂಕಿನಲ್ಲಿ ಒಟ್ಟು 769 ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 448 ಪುರುಷರು ಹಾಗೂ 321 ಮಹಿಳೆಯರು ಇದ್ದಾರೆ. ಆರೋಗ್ಯ ಶಿಬಿರ ಆಯೋಜನೆಯಿಂದ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳದ ಎಷ್ಟೋ ಮಂದಿ ಶಿಬಿರಕ್ಕೆ ಬಂದು ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇದರಿಂದ ಕೂಲಿಕಾರರು ತಮ್ಮ ಆರೋಗ್ಯದ ಕಡೆ ನಿಗಾವಹಿಸಲು ಸಹಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲು 2ನೇ ಹಂತದ ಶಿಬಿರ ಆಯೋಜಿಸಲು ಇಒ ಕೆ. ಸುಷ್ಮಾ ಸಲಹೆ ನೀಡಿದ್ದಾರೆ.

ನರೇಗಾ ಯೋಜನೆಯ ಅಕುಶಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯುತ್ತಿದ್ದು, ಈಗಾಗಲೇ ಸರಗೂರಿನ 13 ಗ್ರಾಪಂಗಳಲ್ಲೂ ಶಿಬಿರ ಆಯೋಜಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಆರೋಗ್ಯ ಶಿಬಿರ ನಡೆಯುತ್ತಿದ್ದು, ಈ ಶಿಬಿರಗಳ ಮೂಲಕ ಆರೋಗ್ಯದ ಮಹತ್ವವನ್ನು ಸಾರುವ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಕಾಯಿಲೆಗಳ ಬಗ್ಗೆ ಅರಿವಿರುವುದಿಲ್ಲ, ಇಂತಹ ತಪಾಸಣೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಕಾಯಿಲೆಗಳ ಬಗ್ಗೆ ತಿಳಿದು, ಹೆಚ್ಚಿನ ಚಿಕಿತ್ಸೆಗೂ ಸಹಕಾರಿಯಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಇಂತಹ ತಪಾಸಣಾ ಶಿಬಿರದ ಸದುಪಯೋಗಪಡೆಯಬಹುದು.

- ಬಿ.ಆರ್‌. ಪೂರ್ಣಿಮಾ, ಸಿಇಒ, ಮೈಸೂರು ಜಿಪಂ.

ಗ್ರಾಪಂ ಆರೋಗ್ಯ ಅಮೃತ ಅಭಿಯಾನ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯ ಸಹಯೋಗದಲ್ಲಿ ಅಕುಶಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕೈಗೊಳ್ಳುವ ಮೂಲಕ ಆರೋಗ್ಯದ ಮಹತ್ವ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಜತೆಗೆ ಸಂಪನ್ಮೂಲ ವ್ಯಕ್ತಿಗಳಿಂದ ಆರೋಗ್ಯದ ಕುರಿತು ಸಲಹೆ, ಸೂಚನೆಗಳನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲಾ ಫಲಾನುಭವಿಗಳು ಪಡೆದುಕೊಳ್ಳಬೇಕು.

-ಡಾ.ಎಂ. ಕೃಷ್ಣರಾಜು, ಜಿಪಂ ಉಪ ಕಾರ್ಯದರ್ಶಿ.

ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳೇ ಇಂದು ದೊಡ್ದ ಸಮಸ್ಯೆಗಳಾಗುತ್ತಿವೆ. ಆದ್ದರಿಂದ ಪ್ರತಿಯೊಬ್ಬ ನರೇಗಾ ಕೂಲಿಕಾರರು ತಮ್ಮ ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು. ನರೇಗಾ ಯೋಜನೆಯಡಿ ಅಕುಶಲ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿರುವುದು ಉತ್ತಮ ಕಾರ್ಯಕ್ರಮವಾಗಿದೆ.

- ಕೆ. ಸುಷ್ಮಾ, ಇಒ, ಸರಗೂರು ತಾಪಂ.

ನರೇಗಾಕ್ಕೆ ಮೆಚ್ಚುಗೆ

ಕನಕಪುರ (ಜ.12): ಮೇಘಾಲಯ ರಾಜ್ಯದ ಯೋ​ಜನಾ ಇಲಾಖೆ ಜಂಟಿ ಕಾರ್ಯದರ್ಶಿ ಡಿ.ಬಿ. ಗುಣಾಂಕ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಬು​ಧ​ವಾರ ತಾಲೂಕಿಗೆ ಭೇಟಿ ನೀಡಿ ನರೇಗಾ ಕಾಮ​ಗಾ​ರಿ​ಗ​ಳನ್ನು ವೀಕ್ಷಣೆ ಮಾಡಿತು. ಕರ್ನಾಟಕದಲ್ಲಿ ಜಲ ಸಂರಕ್ಷಣೆ-ವೈಜ್ಞಾನಿಕ ಯೋಜನೆ ಅನುಷ್ಠಾನ ಕುರಿತು ಅಧ್ಯಯನ ಮಾಡುವ ಉದ್ದೇಶದಿಂದ ಕನ​ಕ​ಪುರ ತಾಲೂಕಿಗೆ ಭೇಟಿ ನೀಡಿದ ಅ​ಧಿಕಾರಿಗಳು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನ ಮಾಡಲಾದ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿ, ಸಂಬಂಧಪಟ್ಟಅಧಿಕಾರಿಗಳ ಬಳಿ ಮಾಹಿತಿ ಪಡೆ ದರು.

ಮೊದಲಿಗೆ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಸಿಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಗ್ರಾಮೀಣ ಉದ್ಯಾನವನಕ್ಕೆ ಭೇಟಿ ನೀಡಿದರು. ಹೈಟೆಕ್‌ ಉದ್ಯಾನವನ ಕಾಮಗಾರಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಉದ್ಯಾನವನದಿಂದ ಆಗುತ್ತಿರುವ ಅನುಕೂಲಗಳ ಬಗ್ಗೆ ಮಾಹಿತಿ ಪಡೆದರು. ನಂತರ ಕಡಸಿಕೊಪ್ಪ ಸರ್ಕಾರಿ ಶಾಲೆಯ ಆವರಣದಲ್ಲಿ ಶಾಲಾ ಆಟದ ಮೈದಾನ ವೀಕ್ಷಿಸಿ, ಮಕ್ಕಳೊಂದಿಗೆ ಕ್ರೀಡಾ ಚಟುವಟಿಕೆ ಕುರಿತು ಸಂವಾದ ನಡೆಸಿದರು. ಮಕ್ಕಳು ಕೂಡ ಅತಿ ಉತ್ಸಾಹದಿಂದ ಭಾಗವಹಿಸಿ ಅಧಿಕಾರಿಗಳ ಮಾತುಗಳನ್ನು ಆಲಿಸಿದರು.

ಬಿಜೆಪಿ ಸೇರಲು ಮುಂದಾ​ಗಿ​ದ್ದ ಶಾಸಕ ಮಂಜು​ನಾಥ್‌: ಬಾಲಕೃಷ್ಣ ಆರೋಪ

ತರು​ವಾಯ ಚೀಲೂರು ಗ್ರಾಮ ಪಂಚಾಯಿತಿಯ ರಸ್ತೆ ಜಕ್ಕಸಂದ್ರ ಗ್ರಾಮದ ಚನ್ನಣ್ಣನ ಕೆರೆ ಅಬಿವೃದ್ಧಿ ಕಾಮಗಾರಿ ವೀಕ್ಷಿಸಿ, ಸಾರ್ವಜನಿಕರ ವಾಯುವಿಹಾರಕ್ಕಾಗಿ ಮಾಡಲಾಗಿ ರುವ ವಾಕಿಂಗ್‌ ಪಾತ್‌ ಕಂಡು ಅಧಿಕಾರಿಗಳನ್ನು ಪ್ರಶಂಸಿದರು. ಅದೇ ರೀತಿ ದ್ಯಾವಸಂದ್ರ ಗ್ರಾಮ ಪಂಚಾಯಿತಿಯ ರೇಷ್ಮೆ ಇಲಾಖೆಯ ಯೋಜನೆಯಡಿ ಅನುಷ್ಠಾನಿಸಲಾದ ರಾಜು/ಚೆಲುವೇಗೌಡ ಅವರ ಜಮೀನಲ್ಲಿ ಹಿಪ್ಪು ನೇರಳೆ ಕೃಷಿ ನಾಟಿ ಕಾಮಗಾರಿ ವೀಕ್ಷಿಸಿ, ಫಲಾನುಭವಿಯ ವಾರ್ಷಿಕ ಆದಾಯ ಹಾಗೂ ರೇಷ್ಮೆ ಕೃಷಿ ಬಗ್ಗೆ ಮಾಹಿತಿ ಪಡೆದರು.

click me!