
ಮೂಡಲಗಿ(ಆ.11): ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ (ಪಿಎಂಜೆಎವೈ) 60 ಕೋಟಿಗೂ ಹೆಚ್ಚು ಫಲಾನುಭವಿ ಕುಟುಂಬಗಳಿಗೆ ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ .5 ಲಕ್ಷ ಆರೋಗ್ಯ ವಿಮೆ ರಕ್ಷಣೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಪ್ರೊ.ಸತ್ಯಪಾಲ್ ಸಿಂಗ್ ಬಾದಲ್ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಕಾರ್ಯಕ್ರಮದಡಿಯಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣದಡಿ ರಾಜ್ಯಗಳಿಗೆ ತಾಂತ್ರಿಕ ಮತ್ತು ಆರ್ಥಿಕ ಬೆಂಬಲ ಒದಗಿಸುತ್ತದೆ. 724 ಜಿಲ್ಲಾ ಎನ್‌ಸಿಡಿ ಕ್ಲಿನಿಕ್‌ಗಳು, 210 ಕಾರ್ಡಿಯಾಕ್ ಕೇರ್ ಸೆಂಟರ್, 6110 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎನ್‌ಸಿಡಿ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್‌ಗಳಿಗೆ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ಸ್ಕ್ರೀನಿಂಗ್‌ಗಾಗಿ ಜನಸಂಖ್ಯೆ ಆಧಾರಿತ ಉಪಕ್ರಮವನ್ನು ಎನ್‌ಎಚ್‌ಎಂ ಯೋಜನೆಯಡಿ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಭಾಗವಾಗಿ ಹೊರತರಲಾಗಿದೆ ಎಂದು ತಿಳಿಸಿದ್ದಾರೆ.
ಉಡಾನ್ 3ನೇ ಸುತ್ತಿನ ಬಿಡ್ಡಿಂಗ್‌ನಲ್ಲಿ ಬೆಳಗಾವಿ ವಿಮಾನ ನಿಲ್ದಾಣ: ಈರಣ್ಣ ಕಡಾಡಿ
ಆಯುಷ್ಮಾನ್ ಭಾರತ್ ಆರೋಗ್ಯ ಸ್ವಾಸ್ಥ್ಯ ಕೇಂದ್ರ ಯೋಜನೆಯ ಮೂಲಕ ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಅಡಿಯಲ್ಲಿ ಎನ್‌ಸಿಡಿಗಳ ತಡೆಗಟ್ಟುವ ಅಂಶವನ್ನು ಸಮುದಾಯ ಮಟ್ಟದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕ್ಯಾನ್ಸರ್ ಸೇರಿದಂತೆ ಇತರ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಬಿಪಿಎಲ್ ಕುಟುಂಬಕ್ಕೆ ಸೇರಿದವರಾಗಿದ್ದರೇ ಅವರಿಗೆ ರಾಷ್ಟ್ರೀಯ ಆರೋಗ್ಯ ನಿಧಿ ಮತ್ತು ಆರೋಗ್ಯ ಸಚಿವರ ವಿವೇಚನಾ ನಿಧಿಯಿಂದ (ಎಚ್‌ಎಂಡಿಜಿ) ಗರಿಷ್ಠ .1,25,000/-ವರೆಗೆ ಹಣಕಾಸು ನೆರವು ನೀಡಲಾಗುತ್ತದೆ ಹಾಗೂ ರಾಷ್ಟ್ರೀಯ ಆರೋಗ್ಯ ನಿಧಿಯಡಿ ಗರಿಷ್ಠ .15 ಲಕ್ಷದವರೆಗೆ ನೀಡಬಹುದಾಗಿದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಅಡಿಯಲ್ಲಿ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಎಲ್ಲರಿಗೂ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ಕೈಗೆಟುಕುವ ಔಷಧಿಗಳು ಮತ್ತು ಚಿಕಿತ್ಸೆಗಾಗಿ ವಿಶ್ವಾಸಾರ್ಹ ಇಂಪ್ಲಾಂಟ್ಸ್ ಫಾರ್ಮಸಿ ಸ್ಟೋರ್‌ಗಳನ್ನು ಕೆಲವು ಆಸ್ಪತ್ರೆಗಳು/ಸಂಸ್ಥೆಗಳಲ್ಲಿ ಸ್ಥಾಪಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.