‘ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ’

By Suvarna NewsFirst Published Mar 21, 2020, 2:57 PM IST
Highlights

ಮಹಾರಾಷ್ಟ್ರ-ಕರ್ನಾಟಕ ಉಭಯ ರಾಜ್ಯಗಳು ಪರಸ್ಪರ ಜನರ ಪ್ರವೇಶ ನಿರ್ಬಂಧ ಕುರಿತು ಸಿಎಂ ಜೊತೆ ಚರ್ಚಿಸಿ ನಿರ್ಧಾರ | ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ|

ಬೆಳಗಾವಿ[ಮಾ.21]: ರಾಜ್ಯದಲ್ಲಿ ಒಂದೇ ದಿನ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಒಬ್ಬರು, ಬೆಂಗಳೂರಿನಲ್ಲಿ ಮೂವರಿಗೆ ಕೊರೋನಾ ಸೋಂಕು ತಗುಲಿದೆ. ನಾಲ್ಕು ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು ಸೋಂಕು ಪೀಡಿತರ ಸಂಖ್ಯೆ 19ಕ್ಕೇರಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 

ಕೋವಿಡ್ -19 ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಐಸೋಲೇಷನ್ ಬೆಡ್ ಮತ್ತಿತರರ ವ್ಯವಸ್ಥೆ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ  ಮಾತನಾಡಿದ ಅವರು, ಮಹಾರಾಷ್ಟ್ರ-ಕರ್ನಾಟಕ ಉಭಯ ರಾಜ್ಯಗಳು ಪರಸ್ಪರ ಜನರ ಪ್ರವೇಶ ನಿರ್ಬಂಧ ಕುರಿತು ಸಿಎಂ ಬಿ. ಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ನಿರ್ಧಾರ  ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. 

ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಮುಂದಿನ ಎರಡು ವಾರ ಮಹತ್ವದ ಅವಧಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು

ಕೊಪ್ಪಳ: ಕೊರೋನಾ ಕಾಟಕ್ಕೆ ದೇವಸ್ಥಾನ ಬಂದ್!.

ಶುಕ್ರವಾರ ರಾಜ್ಯದಲ್ಲಿ ಒಂದೂ ಕರೋನಾ ಸೋಂಕು ಪ್ರಕರಣಗಳು ಕಂಡಿಬಂದಿರಲಿಲ್ಲ. ಆದರೆ, ಇಂದು ಒಂದೇ ದಿನ ನಾಲ್ಕು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ರಾಜ್ಯಾದ್ಯಂತ ಜನರ ಆತಂಕಕ್ಕೆ ಮತ್ತಷ್ಟು ಕಾರಣವಾಗಿದೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್‌:

"

click me!