ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌: ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ

By Suvarna News  |  First Published Feb 21, 2021, 12:23 PM IST

ಪಂಚಮಸಾಲಿ 2A ಮೀಸಲಾತಿ ಹೋರಾಟ| ಅನ್ಯಾಯ ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು| ಇದು ಗಂಭೀರ ಮತ್ತು ಸೂಕ್ಷ್ಮವಾದ ವಿಚಾರ| ಉಳಿದ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಿಎಂ ನೋಡಿಕೊಳ್ಳುತ್ತಾರೆ: ಕೆ. ಸುಧಾಕರ್‌| 


ಕಲಬುರಗಿ(ಫೆ.21):  ಮಹಾರಾಷ್ಟ್ರದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಜಿಲ್ಲೆ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದರಿಂದ ಸೂಕ್ಷ್ಮ ಪ್ರದೇಶವಾಗಿದೆ. ಇದರ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನ ಸಿದ್ಧಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿಯಾದ ಮಾರ್ಗಸೂಚಿಗಳನ್ನ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಕಲಬುರಗಿ ಜಿಲ್ಲಾಡಳಿತದೊಂದಿಗೆ ಮಾತನಾಡುತ್ತೇನೆ. ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ .ಸುಧಾಕರ್ ಸ್ಪಷ್ಟಪಡಿಸಿದ್ದಾರೆ. 

ಪಂಚಮಸಾಲಿ 2A ಮೀಸಲಾತಿ ಹೋರಾಟ ವಿಚಾರದ ಬಗ್ಗೆ ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದಕ್ಕಾಗಿ ವಿಶೇಷ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು. ಎಲ್ಲಾ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. 

Latest Videos

undefined

ಪ್ರತ್ಯೇಕ ರಾಜ್ಯದ ಬೇಡಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದು ಹೀಗೆ

ಅನ್ಯಾಯ ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು. ಇದು ಗಂಭೀರ ಮತ್ತು ಸೂಕ್ಷ್ಮವಾದ ವಿಚಾರವಾಗಿದೆ. ಉಳಿದ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಿಎಂ ಯಡಿಯೂರಪ್ಪ ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
 

click me!