ವಿರೋಧ ಪಕ್ಷದವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿರುಚುತ್ತಾರೆ ಎಂದು ಆರೋಪಿಸಿದರು. ಕಳೆದ 56 ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಲಹೀನ ವರ್ಗಗಳ ಮತ ಪಡೆದಿದ್ದಾರೆ. ಆದರೆ ಅವರಿಗೆ ಮೀಸಲಾತಿ ನೀಡಲು ಸಾಧ್ಯವಾಗಲಿಲ್ಲ. 56 ವರ್ಷ ಅಧಿಕಾರ ನಡೆಸಿದವರು ನೀಡದ ಮೀಸಲಾತಿ ಬಿಜೆಪಿ ಸರ್ಕಾರ ನೀಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ (ನ.07): ವಿರೋಧ ಪಕ್ಷದವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿರುಚುತ್ತಾರೆ ಎಂದು ಆರೋಪಿಸಿದರು. ಕಳೆದ 56 ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಲಹೀನ ವರ್ಗಗಳ ಮತ ಪಡೆದಿದ್ದಾರೆ. ಆದರೆ ಅವರಿಗೆ ಮೀಸಲಾತಿ ನೀಡಲು ಸಾಧ್ಯವಾಗಲಿಲ್ಲ. 56 ವರ್ಷ ಅಧಿಕಾರ ನಡೆಸಿದವರು ನೀಡದ ಮೀಸಲಾತಿ ಬಿಜೆಪಿ ಸರ್ಕಾರ ನೀಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಭಾನುವಾರ ಆಯೋಜಿಸಿದ್ದ ಸ್ಥಳೀಯ ಮುಖಂಡರ ಸಭೆಯಲ್ಲಿ (JDS) ತೊರೆದು (BJP) ಸೇರಿದ ನಲ್ಲಗುಟ್ಟಪಾಳ್ಯ ಗ್ರಾಪಂ ಸದಸ್ಯೆ ಕಾಂತಮ್ಮ ತಿಪ್ಪಾರೆಡ್ಡಿ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಹೊಸಬರು ಬಂದ ಕಾರಣಕ್ಕೆ ಹಳಬರು ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಕಿನಿಮಾತು ಹೇಳಿದರು.
ಶ್ರೀಗಳಿಗೆ ಗುರುವಂದನೆ:
ಉಪವಾಸ ಸತ್ಯಾಗ್ರಹದ ಮೂಲಕ ಮೀಸಲಾತಿಗಾಗಿ ಹೋರಾಟ ನಡೆಸಿದ ಶ್ರೀಪ್ರಸನ್ನಾನಂದ ಶ್ರೀಗಳಿಗೆ ಜಿಲ್ಲೆಯಲ್ಲಿ ಬೃಹತ್ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗುವುದು. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಲಾಗುವುದು. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಮೀಸಲಾತಿ ಸರಿಪಡಿಸಲು ಮುಖ್ಯಮಂತ್ರಿಗಳು ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಭಾಗವನ್ನು ಕೈಗಾರಿಕಾ ಪ್ರದೇಶ ಮಾಡಲಾಗುವುದು. ಇದಕ್ಕೆ ಅಗತ್ಯವಿರುವ ಭೂಮಿ ವಶಕ್ಕೆ ಪಡೆಯಲು ಎಲ್ಲರ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಮಹಾ ಸಮುದ್ರದಂತೆ, ಯಾರೇ ಪಕ್ಷಕ್ಕೆ ಬಂದರೂ ಆತ್ಮೀಯವಾಗಿ ಬರಮಾಡಿಕೊಳ್ಳಬೇಕು, ಸಮಾನ ಗೌರವ ನೀಡುವ ಮೂಲಕ ಪಕ್ಷ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು. ಪಕ್ಷದಲ್ಲಿ ಹಿರಿಯ, ಕಿರಿಯ ಎಂಬ ಯಾವುದೇ ಭೇದವಿಲ್ಲ. ನದಿಯಲ್ಲಿ ಹಳೇ ನೀರು, ಹೊಸ ನೀರು ಬೆರೆತು ಒಟ್ಟಾಗಿ ಹರಿಯುವಂತೆ ವಲಸಿಗ ಮತ್ತು ಮೂಲ ಎಂಬ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಎಲ್ಲರೂ ಬೆರೆತು ನಡೆಯಬೇಕು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ
ಹರಿಯೋ ನದಿಯಲ್ಲಿ ನೀರೆಲ್ಲ ಒಂದೇ ಎಂಬ ಮಾತಿನಂತೆ ನಾವೆಲ್ಲ ಮುಂದೆ ಸಾಗೋಣ ಎಂದು ಸಚಿವರು ಕರೆ ನೀಡಿದರು. ನಾವು ನೋಡಬೇಕಿರುವುದು ಅಭಿವೃದ್ಧಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಕೈ ಜೋಡಿಸೋಣ. ಅಭಿವೃದ್ಧಿ ಪಥದಲ್ಲಿ ಕ್ಷೇತ್ರ ಉತ್ತಂಗ ತಲುಪಲು ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ…, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಮುನಿರಾಜು, ಜೆ.ಕೆ. ರೆಡ್ಡಿ, ಆವುಲಕೊಂಡರಾಯಪ್ಪ, ರಾಜಣ್ಣ, ಮಿಲ್ಟನ್ ವೆಂಕಟೇಶ್, ರಾಮಣ್ಣ, ಮೂರ್ತಿ, ಜಾಲಪ್ಪ, ನರಸಿಂಹಯ್ಯ, ವೆಂಕಟರಮಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
BJP ಸೇರಿದ ಕಾಂಗ್ರೆಸ್ ಜೆಡಿಎಸ್ ಮುಖಂಡರು
ಮೈಸೂರು (n.07): ಬಿಜೆಪಿ ಎನ್.ಆರ್.ವಿಧಾ ನಸಭಾ ಕ್ಷೇತ್ರ ಯುವ ಮೋರ್ಚಾ ವತಿಯಿಂದ ಕಲ್ಯಾಣಗಿರಿಯ ಶ್ರೀಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ವಾರ್ಡ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. (Congress) ,ನ್ನು (JDS) ತೊರೆದ ಸುಪ್ರೀತ್ ಶೆಟ್ಟಿ, ರವಿ, ಮಂಜುನಾಥ್, ಮಹೇಶ್, ಶೋಹೇಬ… ಮತ್ತು ಬೆಂಬಲಿಗರು ಕಲ್ಯಾಣಗಿರಿಯ ಶ್ರೀಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಎನ್.ಆರ್. ಕ್ಷೇತ್ರಯುವ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್. ಶ್ರೀವತ್ಸ ಅವರು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲರಾಗಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬೂತ್‌ಮಟ್ಟದಲ್ಲಿ ಕೆಲಸ ಮಾಡಲು ಸಜ್ಜಾಗುತ್ತಿದ್ದಾರೆ. ಕಳೆದ ಬಾರಿ ಕೊರೋನ ವೇಳೆ ಮನೆ ಮನೆ ಬಾಗಿಲಿಗೆ ಬಡವರಿಗೆ ದಿನನಿತ್ಯ ಬಳಕೆಯ ದವಸ ಧಾನ್ಯಗಳು ಆಹಾರ ಕೊಡುವ ಮೂಲಕ ಶ್ರಮದಾನ ಮಾಡಿದರು.
ಇನ್ನು ಅನೇಕ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ಸವಲತ್ತನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿಯೊಬ್ಬ ಯುವಕರನ್ನು ಪಕ್ಷಕ್ಕೆ ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕೊರೋನ ವೇಳೆ ಕೇಂದ್ರ ಸರ್ಕಾರದ ವ್ಯಾಕ್ಸಿನ್‌ಗಳನ್ನು ಉಚಿತವಾಗಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಅನುಕೂಲವಾಯಿತು.
ಜೆಎಸ್‌ಎಸ್ ಸಂಸ್ಥೆ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮ, ಎನ್.ಆರ್. ಕ್ಷೇತ್ರದ ಚಚ್‌ರ್‍ನ ಫಾದರ್ ಸಹಕಾರದೊಡನೆ ಕೊರೋನಾ ವೇಳೆ ಉಚಿತ ಆಹಾರವನ್ನು ಬಡವರಿಗೆ ಹಸಿವು ನೀಗಿಸಲು ಬಹಳ ಸಹಕರಿಸಿದರು. ಇಂತಹ ಬಗೆ ಬಗೆಯ ಸಾಮಾಜಿಕ ಕೆಲಸ ಮಾಡುವ ಜತೆಗೆ ಸರ್ಕಾರದ ಸವಲತ್ತನ್ನು ಹಾಗೂ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು.
ಬಳಿಕ ಮಾತನಾಡಿದ ಮಾಜಿ ಮೇಯರ್ ಸಂದೇಶ್‌ಸ್ವಾಮಿ, ಈ ಕ್ಷೇತ್ರದಲ್ಲಿ ಕಳೆದ 28 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಯೋಜನೆ ಆಗಿಲ್ಲ. ಮೂಲಭೂತ ಸೌಕರ್ಯಗಳು ಯಾವುದೂ ಆಗಿಲ್ಲ. ಕ್ಷೇತ್ರದಲ್ಲಿ ಯಾವುದೇ ಸುಸಜ್ಜಿತವಾದ ಆಸ್ಪತ್ರೆ, ಕಾಲೇಜು ಇಲ್ಲ.5 ಕಿ.ಮೀ. ಸಿಟಿ ಭಾಗಕ್ಕೆ ತೆರಳಬೇಕಿದೆ. ಮೈಸೂರಿನ ಕೃಷ್ಣರಾಜ, ಚಾಮರಾಜ ಕ್ಷೇತ್ರದಲ್ಲಿ ಗುದ್ದಲಿ ಪೂಜೆ ಮತ್ತು ಅಬಿವೃದ್ಧಿ ಕಾರ್ಯ ನಡೆಯುತ್ತಿದೆ.
ನರಸಿಂಹರಾಜ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಆದ್ದರಿಂದ ಇಲ್ಲಿ ಜನರಿಗೂ ಯಾವುದೇ ಕೆಲಸಗಳು ಮಾಡುತ್ತಿಲ್ಲ. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೂ ಸಹ ಯಾವುದೇ ಕೆಲಸ ಕಾರ್ಯಗಳು ಆಗದೆ ಅವರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ಬಾರಿ ಚುನಾವಣೆಯಲ್ಲಿ ನರಸಿಂಹರಾಜ ಕ್ಷೇತ್ರ ಅದ್ದೂರಿಯಾಗಿ ಬಿಜೆಪಿ ಜಯಭೇರಿ ಆಗುವಂತೆ ಕೆಲಸ ಮಾಡೋಣ. ನಿಮ್ಮಂತಹ ಯುವ ಪಡೆ ಪ್ರತಿ ಬೂತಿನಿಂದ ಪಕ್ಷಕ್ಕೆ ದುಡಿಯುವಂತಾಗಲಿ ಹಾಗೂ ಕೇಂದ್ರ ರಾಜ್ಯ ಸರ್ಕಾರಗಳು ಇರುವುದರಿಂದ ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಅಭಿವೃದ್ಧಿ ಆಗುತ್ತದೆ ಎಂದರು.