ಭಾರೀ ಮಳೆ ಎಚ್ಚರಿಕೆ : ಆರೆಂಜ್‌ ಅಲರ್ಟ್‌

By Kannadaprabha NewsFirst Published Sep 10, 2020, 3:51 PM IST
Highlights

ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕೊಡಗಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಮಡಿಕೇರಿ (ಸೆ.10): ಕೊಡಗು ಜಿಲ್ಲೆಯಲ್ಲಿ ಸೆ.10ರಿಂದ 13ರ ವರೆಗೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದೆ. ಆದ್ದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಡುವು ನೀಡಿ ಮಳೆ ಸುರಿಯಿತು. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವ​ಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 10.10 ಮಿ.ಮೀ. ಕಳೆದ ವರ್ಷ ಇದೇ ದಿನ 48.22 ಮಿ.ಮೀ. ಮಳೆಯಾಗಿತ್ತು. 

ಬಯಲುಸೀಮೆ ಸೇರಿ 6 ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ ...

ಜನವರಿಯಿಂದ ಇಲ್ಲಿಯವರೆಗಿನ ಮಳೆ 1965.86 ಮಿ.ಮೀ, ಕಳೆದ ವರ್ಷ ಇದೇ ಅವ​ಧಿಯಲ್ಲಿ 2419.61 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ 5.30 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 0.72 ಮಿ.ಮೀ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 24.27 ಮಿ.ಮೀ ಮಳೆಯಾಗಿದೆ. ಮಡಿಕೇರಿ ಕಸಬಾ 14, ನಾಪೋಕ್ಲು 5, ಸಂಪಾಜೆ 1, ಭಾಗಮಂಡಲ 1.20, ವಿರಾಜಪೇಟೆ ಕಸಬಾ 3.80, ಅಮ್ಮತ್ತಿ 0.50, ಸೋಮವಾರಪೇಟೆ ಕಸಬಾ 73.40, ಶಾಂತಳ್ಳಿ 8.20, ಕೊಡ್ಲಿಪೇಟೆ 4.60, ಕುಶಾಲನಗರ 14.40, ಸುಂಟಿಕೊಪ್ಪ 45 ಮಿ.ಮೀ. ಮಳೆಯಾಗಿದೆ.

click me!