ಭಾರಿ ಮಳೆ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವು ಪ್ರದೇಶ ಜಲಾವೃತ

Published : Jul 12, 2019, 01:08 PM IST
ಭಾರಿ ಮಳೆ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವು ಪ್ರದೇಶ ಜಲಾವೃತ

ಸಾರಾಂಶ

ಕರ್ನಾಟಕದಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತವಾಗಿವೆ. 

ಬೆಳಗಾವಿ [ಜು.12] : ಬೆಳಗಾವಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಬಿಟ್ಟು ಬಿಡದೇ  ಮಳೆ ಸುರಿಯುತ್ತಿದೆ. 

ಜಿಲ್ಲೆಯ ಕೆಲ ತಾಲೂಕುಗಳಲ್ಲಿ  ಮಳೆ ಆರ್ಭಟ ಮುಂದುವರಿದಿದ್ದು, ಹಲವು ಗ್ರಾಮಗಳು ಸಂಪರ್ಕವನ್ನೇ ಕಡಿದುಕೊಂಡಿವೆ. 

ಮಲಪ್ರಭಾ ನದಿ ತುಂಬಿ ಹರಿಯುತ್ತಿರುವುದರಿಂದ ಚಿಕಲೆ ಪಾರವಾಡ, ಮೋದಕೊಪ್ಪ, ತೀರ್ಥಕುಂಡೆ ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. 

ಖಾನಾಪುರ ತಾಲೂಕಿನ ಹಬ್ಬನಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಆಂಜನೇಯ ದೇವಾಲಯ ಜಲಾವೃತಗೊಂಡಿದ್ದು,  ದೇವವಸ್ಥಾನದ ಕಳಶ ಮಾತ್ರ ಕಾಣಿಸುತ್ತಿದೆ. 

ಮಳೆಯ ಅಬ್ಬರದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆಗಳಿಂದ ಹೊರಕ್ಕೆ ಬರುವುದೇ ಅಸ್ತವ್ಯಸ್ತವಾಗಿದೆ. ಇನ್ನೂ ಕೆಲ ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

PREV
click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!